ನವದೆಹಲಿ: ದೆಹಲಿಯಲ್ಲಿರುವ ಡಿಸಿಎಂ ಮನೀಶ್ ಸಿಸೋಡಿಯಾ ಅವರ ನಿವಾಸಕ್ಕೆ ಸಿಬಿಐ ತಂಡ ಆಗಮಿಸಿದೆ. ಸಿಸೋಡಿಯಾ ಅವರ ನಿವಾಸ ಸೇರಿದಂತೆ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಏಜೆನ್ಸಿ ದೆಹಲಿ-ಎನ್ಸಿಆರ್ನ 21 ಸ್ಥಳಗಳ ಮೇಲೆ ದಾಳಿ ನಡೆಸುತ್ತಿದೆ. ಸಿಬಿಐ ಶುಕ್ರವಾರ ಬೆಳಿಗ್ಗೆ ದೆಹಲಿ ಉಪಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರ ನಿವಾಸದ ಮೇಲೆ ದಾಳಿ ನಡೆಸಿದೆ.
ಈ ಬಗ್ಗೆ ಟ್ವಿಟ್ ಮಾಡಿರುವ ಮನೀಶ್ ಸಿಬಿಐ ತಂಡ ನಮ್ಮ ಮನೆಗೆ ಬಂದಿದೆ ಅವರಿಗೆ ಸ್ವಾಗತವಿದೆ. ನಾವು ನಿಷ್ಠಾವಂತ ಪ್ರಾಮಾಣಿಕರು. ಲಕ್ಷಾಂತರ ಮಕ್ಕಳ ಭವಿಷ್ಯವನ್ನು ಸೃಷ್ಟಿಸುತ್ತಿದ್ದಾರೆ. ನಮ್ಮ ದೇಶದಲ್ಲಿ ಒಳ್ಳೆಯ ಕೆಲಸ ಮಾಡುವವರಿಗೆ ಇದೇ ರೀತಿ ಕಿರುಕುಳ ನೀಡುತ್ತಿರುವುದು ದುರದೃಷ್ಟಕರ. ಆದ್ದರಿಂದಲೇ ನಮ್ಮ ದೇಶ ಇನ್ನೂ ನಂಬರ್-1 ಆಗಿಲ್ಲ ಅಂತ ಹೇಳಿದ್ದಾರೆ.
#WATCH | A CBI team reaches the residence of Deputy CM Manish Sisodia in Delhi. The agency is raiding 21 locations in Delhi-NCR in connection with the excise policy case, including Sisodia's residence. pic.twitter.com/3txFCtiope
— ANI (@ANI) August 19, 2022