ಕನ್ಯಾಕುಮಾರಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಇತರ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ‘ಭಾರತ್ ಜೋಡೋ ಯಾತ್ರೆ’ಯನ್ನು ಪ್ರಾರಂಭಿಸಿದರು. ಅವರು ಪಕ್ಷದ ಕಾಶ್ಮೀರದವರೆಗೆ 150 ದಿನಗಳ ಕಾಲ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.
ಭಾರತ ಜೋಡಾ ಯಾತ್ರೆಗೂ ಮುನ್ನ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಬುಧವಾರ ಶ್ರೀಪೆರಂಬುದೂರಿನ ಅವರ ಸ್ಮಾರಕದಲ್ಲಿ ತಮ್ಮ ತಂದೆ ಮತ್ತು ಮೃತ ಕಾಂಗ್ರೆಸ್ ನಾಯಕ ರಾಜೀವ್ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ರಾಹುಲ್ ಗಾಂಧಿ ಅವರೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಕೂಡ ಇದ್ದರು. 1991ರ ಮೇ 21ರಂದು ನಡೆದ ಬಾಂಬ್ ಸ್ಫೋಟದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯಾದ ಸ್ಥಳವೇ ಶ್ರೀಪೆರಂಬುದೂರ್ ಆಗಿದೆ.
ತಮ್ಮ ತಂದೆಯ ಸ್ಮಾರಕಕ್ಕೆ ಭೇಟಿ ನೀಡಿದ ನಂತರ ಟ್ವೀಟ್ ಮಾಡಿದ ರಾಹುಲ್ ಗಾಂಧಿ, “ದ್ವೇಷ ಮತ್ತು ವಿಭಜನೆಯ ರಾಜಕೀಯದಿಂದ ನಾನು ನನ್ನ ತಂದೆಯನ್ನು ಕಳೆದುಕೊಂಡಿದ್ದೇನೆ. ನಾನು ನನ್ನ ಪ್ರೀತಿಯ ದೇಶವನ್ನು ಸಹ ಅದಕ್ಕಾಗಿ ಕಳೆದುಕೊಳ್ಳುವುದಿಲ್ಲ. ಪ್ರೀತಿ ದ್ವೇಷವನ್ನು ಗೆಲ್ಲುತ್ತದೆ. ಭರವಸೆ ಭಯವನ್ನು ಸೋಲಿಸುತ್ತದೆ. ಒಟ್ಟಾಗಿ, ನಾವು ಜಯಿಸುತ್ತೇವೆ ಅಂತ ಹೇಳಿದರು.