*ಅವಿನಾಶ್‌ ಆರ್ ಭೀಮಸಂದ್ರ
ಬೆಂಗಳೂರು: ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್‌ಗೆ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ ಟ್ವಿಟ್‌ ಮಾಡಿರುವ ಸಚಿವ ಸುನೀಲ್‌ ಕುಮಾರ್‌ ಕುವೆಂಪು ವಿರಚಿತ ನಾಡಗೀತೆ”ಜಯಭಾರತ ಜನನಿಯ ತನುಜಾತೆ” ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂಬುದನ್ನು ತಿಳಿಸಲು ಹರ್ಷವೆನಿಸುತ್ತಿದೆ. ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಇನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ನಾಡಗೀತೆಯನ್ನು ಹಾಡಲಾಗುತ್ತದೆ ಅಂತ ತಿಳಿಸಿದ್ದಾರೆ.

ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ‘ಜಯ ಭಾರತ ಜನನಿಯ ತನುಜಾತೆ’ ಹಾಡುವ ಅವಧಿಯನ್ನು 2.30 ನಿಮಿಷಕ್ಕೆ ನಿಗದಿ ಮಾಡಬೇಕು ಎಂದು ಶಿಫಾರಸು ಮಾಡಿತ್ತು, ಅದರಂತೆ ಈಗ ರಾಜ್ಯ ಸರ್ಕಾರ ಶಿಫಾರಸ್ಸು ಒಪ್ಪಿಕೊಂಡಿದೆ.

BIG BREAKING NEWS: Duration of singing of national anthem fixed at 2 minutes 30 seconds, order from state government

Share.
Exit mobile version