ಹುಬ್ಬಳ್ಳಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಮಾಡಲು ಹುಬ್ಬಳ್ಳಿ ಮಹಾನಗರ ಪಾಲಿಕೆ ಒಮ್ಮತದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈದ್ಗಾ ಮೈದಾನದಲ್ಲಿ ಸಾರ್ವಜನಿಕವಾಗಿ 3 ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ನಿರ್ಣಯವನ್ನು ಮಾಡಲಾಗಿದೆ ಮೇಯರ್ ಈರೇಶ ಅಂಚಟಗೇರಿ ಹೇಳಿದ್ದಾರೆ.
ಇಂದು ಪ್ರವಾಸಿ ಮಂದಿರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಲಾಯಿತು ಸಭೆಯ ಬಳಿಕ ಮೇಯರ್ ಈರೇಶ ಅಂಚಟಗೇರಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಇನ್ನೂ ಇದೇ ವೇಳೆ ಸಭೆಯಲ್ಲಿ ಸಭೆಯಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಮೇಯರ್ ಈರೇಶ ಅಂಚಟಗೇರಿ, ಎಡಿಜಿಪಿ ಅಲೋಕ್ಕುಮಾರ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೋಲಿಸ್ ಆಯುಕ್ತ ಲಾಭೂರಾಮ, ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ ಬಿ. ಇತರರು ಭಾಗವಹಿಸಿದ್ದರು.