ಅವಿನಾಶ್ ಆರ್ ಭೀಮಸಂದ್ರ ಜೊತೆಗೆ ಲತಾಶ್ರೀ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ನಿಗದಿತ ಅವಧಿಗೆ ಹಾಜರಾಗಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಆದೇಶ ಹೊರಡಿಸಿದ್ದು, ಈ ಮೂಲಕ ಕೆಲಸಕ್ಕೆ ಸರಿಯಾದ ಸಮಯಕ್ಕೆ ಬಾರದ ಹಾಗೂ ಕೆಲಸ ವೇಳೆಯಲ್ಲಿ ಇರದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ.
ಇದೇ ವೇಳೆ ಆದೇಶ ಪ್ತ್ರದಲ್ಲಿ ತಮ್ಮ ಕಾರ್ಯಗಳಿಗೆ ನಿಗದಿತ ಸಮಯದಲ್ಲಿ ಕಚೇರಿಗೆ ಏಭಟಿ ನೀಡಿದ ವೇಳೆಯಲ್ಲ ಕಚೇರಿ ಸಿಬ್ಬಂದಿಳಗು ಅಧಿಕಾರಿಗಳು ಇಲ್ಲದೇ ಇರುವುದರಿಂದ ಜನತೆ ಬವಣೆ ಪಡುವಂತಾಗಿದೆ. ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, “ಸರ್ಕಾರಿ ನೌಕರರು ಕಚೇರಿಗೆ ನಿಗದಿತ ಅವಧಿಗೆ ಅಂದ್ರೆ ಬೆಳಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. ಕಚೇರಿ ಅವಧಿ ಪೂರ್ಣವಾಗುವವರೆಗೆ ನಿಗದಿತ ಸ್ಥಾನದಲ್ಲಿರಬೇಕು. ಇನ್ನು ಕಚೇರಿ ಅವಧಿಯಲ್ಲಿ ಅನ್ಯ ಕೆಲಸದ ಮೇಲೆ ತೆರಳಿದ್ರೆ, ಅದಕ್ಕೆ ಕಾರಣವೇನು ಅನ್ನೋದನ್ನ ನಮೂದಿಸಿ ಅಧಿಕಾರಿಗಳ ಪೂರ್ವಾನುಮತಿ ಪಡೆದುಕೊಳ್ಳಬೇಕು” ಎಂದಿದ್ದಾರೆ.
ಇನ್ನು ನೌಕಕರು ಕೆಲಸಕ್ಕೆ ತಡವಾಗಿ ಬಂದರೇ, ಕಚೇರಿ ಅವಧಿಯಲ್ಲಿ ಸ್ವಸ್ಥಾನದಲ್ಲಿ ಇಲ್ಲದಿದ್ದರೆ, ಮೇಲಧಿಕಾರಿಗಳ ಅನುಮತಿ ಪಡೆಯದಿದ್ದರೆ ನೌಕರರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಲಾಗಿದೆ.