ನವದೆಹಲಿ : ಮೇಕೆದಾಟು ಅಣೆಕಟ್ಟು (Mekedatu Dam) ನಿರ್ಮಾಣ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ಅರ್ಜಿ ವಿಚಾರಣೆಯನ್ನು ಆಗಸ್ಟ್ 10 ಕ್ಕೆ ಮುಂದೂಡಿದೆ.
ʻದೇಶದಲ್ಲಿ ಭದ್ರತೆ ಸ್ಥಾಪಿಸಲಾಗಿದೆ, ಸಿಖ್ಖರು & ಭಾರತೀಯರೇ ಅಫ್ಘಾನಿಸ್ತಾನಕ್ಕೆ ವಾಪಸ್ ಬನ್ನಿʼ: ತಾಲಿಬಾನ್ ಒತ್ತಾಯ
ತಮಿಳುನಾಡು ಸರ್ಕಾರವು ಮೇಕೆದಾಟು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ಸಂಬಂಧ ಇಂದಿನ ವಿಚಾರಣೆ ವೇಳೆ ಹೆಚ್ಚುವರಿ ಲಿಖಿತ ದಾಖಲೆಗಳನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿತು. ಈ ಹಿನ್ನೆಲೆಯಲ್ಲಿ ಇದಕ್ಕೆ ಉತ್ತರಿಸಲು ಸಮಯ ಬೇಕು ಎಂದು ಕರ್ನಾಟಕ ಪರ ವಕೀಲ ಶಾಮ್ ದಿವಾನ್ ವಾದ ಮಂಡಿಸಿದ್ದಾರೆ.
BIGG NEWS: ಸೋನಿಯಾ ಗಾಂಧಿ ಇಡಿ ಅಧಿಕಾರಿಗಳ ವಿಚಾರಣೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಮೇಕೆದಾಟು ಅರ್ಜಿ ವಿಚಾರಣೆ ಹಂತದಲ್ಲಿದ್ದು, ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ಸಧ್ಯಕ್ಕೆ ಚರ್ಚೆಯಾಗಬಾರದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು ಆಗಸ್ಟ್ 10ಕ್ಕೆ ವಿಚಾರಣೆ ಮುಂದೂಡಿದೆ.