ಮಂಗಳೂರು: ಮಂಗಳೂರಿನ ನಾಗೂರಿಯಲ್ಲಿ ಚಲಿಸುತ್ತಿರುವಾಗಲೇ ಆಟೋದಲ್ಲಿ ನಿಗೂಢ ಸ್ಪೋಟವಾಗಿದ್ದು, ಘಟನೆಯಲ್ಲಿ ಆಟೋ ಚಾಲಕ ಮತ್ತು ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಇಬ್ಬರಿಗೂ ಸಣ್ಣಪುಟ್ಟ ಗಾಯಗೊಂಡಿದೆ ಎನ್ನಲಾಗಿದೆ. ಸದ್ಯ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಅಂತ ತಿಳಿದು ಬಂದಿದೆ. ಸ್ಥಳದಲ್ಲಿ ಜನತೆ ಭಯ ಭೀತಿಯಿಂದ ಓಡಾಡುತ್ತಿರುವುದು ಕಂಡು ಬಂದಿದೆ.
ಇಂದು ಸಂಜೆ ಐದು ಘಂಟೆ ಸುಮಾರಿಗೆ ಆಟೋಗೆ ಪ್ರಯಾಣಿಕ ಹತ್ತಿದ ಸಮಯದಲ್ಲಿ ಈ ಘಟನೆ ನಡೆದಿದೆ. ಆಟೋದಲ್ಲಿಕುಕ್ಕರ್ ಇರೋದುಕಂಡು ಬಂದಿದೆ ಎನ್ನಲಾಗಿದೆ.
ಘಟನ ಸ್ಥಳಕ್ಕೆ ಮಂಗಳೂರು ಪೋಲಿಸ್ ಆಯುಕ್ತ ಶಶಿಕುಮಾರ್ ಹಾಗೂ ಹಿರಿಯ ಪೋಲಿಸ್ ಅಧಿಕಾರಿಗಳು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಇದೇ ವೇಳೆ ಘಟನೆ ಸ್ಥಳಕ್ಕೆ ವಿದಿವಿಜ್ಞಾನ ತಜ್ಞರು ಕೂಡ ಆಗಮಿಸಿದ್ದು, ಘಟನೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಅಂತ ತಿಳಿದು ಬಂದಿದೆ. ಕಂಕಣ ಠಾಣೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಸಾಂಧರ್ಬಿಕಚಿತ್ರ