ರಾಂಚಿ: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ, ನಿತೀಶ್ ಕುಮಾರ್ ಅವರು ಮಂಗಳವಾರ 164 ಶಾಸಕರ ಪಟ್ಟಿಯನ್ನು ಬಿಹಾರ ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ ಮತ್ತು ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ ಎಂದು ಹೇಳಿದರು. “ನಾವು 164 ಶಾಸಕರ ಪಟ್ಟಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದೇವೆ ಮತ್ತು ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದೇವೆ. ಪ್ರಮಾಣ ವಚನ ಸ್ವೀಕಾರ ಯಾವಾಗ ನಡೆಯಬಹುದು ಎಂಬುದನ್ನು ಅವರು ನಮಗೆ ತಿಳಿಸುತ್ತಾರೆ ಎಂದು ನಿತೀಶ್ ಸುದ್ದಿಗಾರರಿಗೆ ತಿಳಿಸಿದರು.
ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರನ್ನು ಮಹಾಘಟಬಂಧನ್ ಅಥವಾ ಮಹಾಮೈತ್ರಿಕೂಟದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ನಿತೀಶ್ ಕುಮಾರ್ ಅವರು ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ನಡುವಿನ ಮೈತ್ರಿಯನ್ನು ಕೊನೆಗೊಂಡು, ಮಂಗಳವಾರ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಿಹಾರ ರಾಜ್ಯಪಾಲರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಜೆಡಿಯು ನಾಯಕ ನಿತೀಶ್ ಕುಮಾರ್, “ನಮಗೆ ಏಳು ಪಕ್ಷಗಳು ಮತ್ತು ಒಬ್ಬ ಸ್ವತಂತ್ರ ಶಾಸಕರ ಬೆಂಬಲವಿದೆ. ಬೆಂಬಲ ಪತ್ರಕ್ಕೆ ಎಲ್ಲರೂ ಸಹಿ ಹಾಕಿದ್ದಾರೆ’ ಅಂತ ಅವರು ಹೇಳಿದ್ದಾರೆ. ಏತನ್ಮಧ್ಯೆ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಆರ್ಜೆಡಿಯ ತೇಜಸ್ವಿ ಯಾದವ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದ ನಂತರ ಬಿಹಾರ ಬಿಜೆಪಿ ಇಂದು ಸಂಜೆ ಕೋರ್ ಗ್ರೂಪ್ ಸಭೆಯನ್ನು ಕರೆದಿದೆ.