ನವದೆಹಲಿ : ಉಪರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ತನ್ನ ಅಭ್ಯರ್ಥಿಯನ್ನ ಘೋಷಿಸಿದ್ದು, ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನ ತನ್ನ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ.
NDA's candidate for the post of Vice President of India to be Jagdeep Dhankhar: BJP chief JP Nadda pic.twitter.com/RYIeIP7Nug
— ANI (@ANI) July 16, 2022
ಶನಿವಾರ ಸಂಜೆ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಉಪರಾಷ್ಟ್ರಪತಿ ಅಭ್ಯರ್ಥಿಯ ಹೆಸರನ್ನ ಚರ್ಚಿಸಲಾಯಿತು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಜಗದೀಪ್ ಧಂಕರ್ ಅವರ ಹೆಸರನ್ನ ಘೋಷಿಸಿದರು ಮತ್ತು ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹ ಭಾಗವಹಿಸಿದ್ದರು. ಇನ್ನು ಮಧ್ಯಾಹ್ನ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿದ್ದರು. ಇದಕ್ಕೂ ಮೊದಲು, ಧಂಕರ್ ಶುಕ್ರವಾರ ಗೃಹ ಸಚಿವ ಅಮಿತ್ ಶಾ ಅವರನ್ನ ಭೇಟಿ ಮಾಡಿದ್ದರು.
ಅಂದ್ಹಾಗೆ, ಉಪರಾಷ್ಟ್ರಪತಿ ಚುನಾವಣೆಗೆ ಆಗಸ್ಟ್ 6, 2022 ರಂದು ಮತದಾನ ನಡೆಯಲಿದ್ದು, ಅದೇ ದಿನ ಫಲಿತಾಂಶವೂ ಹೊರಬೀಳಲಿದೆ. ಹಾಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 11ರಂದು ಕೊನೆಗೊಳ್ಳುತ್ತದೆ.