ಕಲಬುರ್ಗಿ : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರ ಬಹಳ ಜೋರಾಗಿತ್ತು. ಅಲ್ಲದೆ ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರು ದೆಹಲಿಗೆ ಹೋಗಿ ಹೈಕಮಾಂಡ್ ಅವರನ್ನು ಭೇಟಿಯಾಗಿ ನಾಯಕತ್ವ ಬದಲಾವಣೆ ಕುರಿತು ಚರ್ಚಿಸಿದರೆ, ಮತ್ತೊಂದು ಕಡೆ ಸಿಎಂ ಸಿದ್ದರಾಮಯ್ಯ ಬಣ ದೆಹಲಿಗೆ ಹೋಗಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿಯಾಗಿ ಸಂಪುಟ ಪುನಾರಚನೆ ಕುರಿತು ಚರ್ಚೆ ಮಾಡಿತ್ತು.
ಇದೀಗ ಮಹತ್ವದ ಬೆಳವಣಿಗೆ ಒಂದರಲ್ಲಿ ರಾಜ್ಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಗೊಂದಲ ಶೀಘ್ರ ಬಗೆಹರಿಯಲಿದೆ. ಸಿಎಂ ಬದಲಾವಣೆ ವಿಚಾರವಾಗಿ ಬಂದರೆ ನಾವೆಲ್ಲ ಚರ್ಚಿಸುತ್ತೇವೆ. ಹಾಗಾಗಿ ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ನಾವೆಲ್ಲರೂ ಈ ಕುರಿತು ಚರ್ಚಿಸುತ್ತೇವೆ ಸಿಎಂ ಬದಲಾವಣೆಯ ಬಗ್ಗೆ ಇನ್ನೂ ಕೂಡ ಸಮಯವಿದೆ. ಸಮಯ ಬಂದಮೇಲೆ ನೋಡೋಣ ಎಂದು ಮಲ್ಲಿಕಾರ್ಜುನ ಖರ್ಗೆ ಎಲ್ಲ ಗೊಂದಲಕ್ಕು ಇದೀಗ ತೆರೆ ಎಳೆದಿದ್ದಾರೆ.








