ಧಾರವಾಡ : ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.
ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ.
ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು ಹಾಗೂ ಪುನರ್ವಸತಿ ಸೇವೆ ಕಲ್ಪಿಸುವಲ್ಲಿ ಮಕ್ಕಳ ಸಹಾಯವಾಣಿ 1098 ಮಹತ್ವದ ಪಾತ್ರವಹಿಸಿದೆ.
ಈ ಸಂಖ್ಯೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿದ್ದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕತೆ ಸಂಕಷ್ಟದಲ್ಲಿನ ಮಕ್ಕಳ ರಕ್ಷಣೆ ಸೇರಿದಂತೆ ವಿವಿಧ ರೀತಿಯ ಮಕ್ಕಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗಿದೆ.
ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಶಾಶ್ವತ ಫಲಕದಲ್ಲಿ ಪ್ರದರ್ಶಿಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.