ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ವಿದೇಶದಲ್ಲಿ ಕುಳಿತಿಕೊಂಡೆ ಇದೀಗ ವಿಡಿಯೋ ಒಂದನ್ನು ರಿಲೀಸ್ ಮಾಡಿದ್ದಾರೆ. ಎಸ್ ಐ ಟಿ ಅಧಿಕಾರಿಗಳ ಎದುರು ಮೇ 31ಕ್ಕೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದ್ದವು. ಅಲ್ಲದೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಹಲವಾರು ಬಾರಿ ನೋಟಿಸ್ ನೀಡಿದ್ದರು.ಆದರೆ ಯಾವುದಕ್ಕೂ ಅವರು ಉತ್ತರ ನೀಡಿರಲಿಲ್ಲ. ಇದೀಗ ಕೊನೆಗೂ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷವಾಗಿದ್ದಾರೆ. ವಿದೇಶದಲ್ಲಿ ಕುತು ಪ್ರಜ್ವಲ್ ವಿಡಿಯೋ ರಿಲೀಸ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ವಿಡಿಯೋದಲ್ಲಿ ನಾನು ವಿದೇಶಕ್ಕೆ ಹೋಗಿದ್ದು ಪ್ರಿ ಪ್ಲಾನ್ ಎಂದು ಪ್ರಜ್ವಲ್ ಹೇಳಿದ್ದಾರೆ. ಮೇ 31ಕ್ಕೆ SIT ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ. ನನ್ನ ತಂದೆ ತಾಯಿ ಹಾಗೂ ತಾತನಿಗೆ ನಾನು ಕ್ಷಮೆ ಕೋರುತ್ತೇನೆ. ಅಲ್ಲದೆ ಜನರಿಗೆ ಜೆಡಿಎಸ್ ಕಾರ್ಯಕರ್ತನಿಗೆ ಕ್ಷಮೆ ಕೋರುತ್ತೇನೆ. ವಿದೇಶಕ್ಕೆ ಹೋಗುವುದು ಮೊದಲೇ ನಿಗದಿಯಾಗಿತ್ತು. ಏಪ್ರಿಲ್ 26ರಂದು ವಿದೇಶ ಪ್ರವಾಸ ನಿಗದಿಯಾಗಿತ್ತು ಎಂದು ವಿಡಿಯೋದಲ್ಲಿ ಹೇಳಿದ್ದಾರೆ.