ಬೆಂಗಳೂರು : ಕಳೆದ ಸೋಮವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳ ಜೊತೆಗೆ ವಿದೇಶಿ ಪ್ರಜೆಗಳ ಬಂಧನವಾಗಿತ್ತು. ಇದೀಗ ಇಂದು ಮತ್ತೆ ಪೀಣ್ಯದಲ್ಲಿ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹೌದು ಬೆಂಗಳೂರಿನ ಪೀಣ್ಯದಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನದ ಕುಟುಂಬವನ್ನು ಪೊಲೀಸರು ಪತ್ತೆಹಚ್ಚಿದ್ದು, ಮೂವರನ್ನು ಬಂಧಿಸಿದ್ದಾರೆ. ಇದರೊಂದಿಗೆ, ಕಳೆದ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಐದಕ್ಕೂ ಹೆಚ್ಚು ಮಂದಿ ಪಾಕಿಸ್ತಾನ ಪ್ರಜೆಗಳನ್ನು ಬಂಧಿಸಿದಂತಾಗಿದೆ. ಹಿಂದೂ ಹೆಸರುಗಳನ್ನಿಟ್ಟುಕೊಂಡು ದಾವಣೆಗರೆಯಲ್ಲಿ ವಾಸವಿದ್ದ ಪಾಕಿಸ್ತಾನಿ ಪ್ರಜೆಗಳನ್ನು ನಿನ್ನೆ ತಾನೇ ಬಂಧಿಸಿದ್ದರು.
ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ!
ಇನ್ನು ಬಂಧಿತ ಪಾಕಿಸ್ತಾನ ಪ್ರಜೆಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಸ್ಪೋಟಕ ಮಾಹಿತಿ ಒಂದು ಹೊರಬಿದ್ದಿದ್ದು, ಪಾಕಿಸ್ತಾನದಿಂದ 15ಕ್ಕೂ ಹೆಚ್ಚು ಜನ ಭಾರತಕ್ಕೆ ಅಕ್ರಮವಾಗಿ ನುಸುಳಿ ಬಂದಿರುವುದು ಗೊತ್ತಾಗಿದೆ. ಹದಿನೈದಕ್ಕೂ ಅಧಿಕ ಮಂದಿ ಮೆಹದಿ ಫೌಂಡೇಷನ್ ಸೇರಿದ್ದರು. ಇವರೆಲ್ಲ ಯೂನಸ್ ಅಲ್ಗೋರ್ ಧರ್ಮ ಗುರುಗಳ ಪರ ಪ್ರಚಾರಕ್ಕಾಗಿ ಆಗಮಿಸಿದ್ದಾರೆ ಎನ್ನಲಾಗಿದೆ.