ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಭಾರಿ ಚರ್ಚೆ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಸಂಸದ ರಾಜಶೇಖರ ಹಿಟ್ನಾಳ ದೆಹಲಿಯಲ್ಲಿ ಔತಣಕೂಟ ಏರ್ಪಡಿಸಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರುಗಳಿಗೆ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್ 15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ.
ಹೌದು ನವೆಂಬರ್ ಕ್ರಾಂತಿ ಚರ್ಚೆ ಮಧ್ಯ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಳ್ಳಲಿದ್ದು ಕಾಂಗ್ರೆಸ್ ಮನೆಯಲ್ಲಿ ದೆಹಲಿ ದಂಡಯಾತ್ರೆ ಜೋರಾಗಿದೆ. ನವೆಂಬರ್ 15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ ಹೈಕಮಾಂಡ್ ನಾಯಕರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಆಗಲಿದ್ದಾರೆ. ಸಿಎಂ ಬದಲಾವಣೆ ಮತ್ತು ಸಂಪುಟ ಪುನಾರಚನ ಸೇರಿ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇದೇ ವೇಳೆ ದೆಹಲಿ ಪ್ರವಾಸದ ವೇಳೆ ಶಕ್ತಿ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ನವೆಂಬರ್ 16ರಂದು ರಾಜಶೇಖರ್ ಹಿಟ್ನಾಳ ಮನೆಯಲ್ಲಿ ಡಿನ್ನರ್ ಸಭೆ ಇದ್ದು ಆಪ್ತನ ಮನೆಯಲ್ಲಿ ಡಿನ್ನರ್ ಮೀಟಿಂಗ್ ಆಯೋಜನೆ ಮಾಡಲಾಗಿದೆ. ನವೆಂಬರ್ 16ರಂದು ರಾಜಶೇಖರ್ ಮನೆಯಲ್ಲಿ ಡಿನ್ನರ್ ಸಭೆ ನಡೆಯಲಿದ್ದು ದಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬಣದ ಶಾಸಕರು ಭಾಗಿಯಾಗಲಿದ್ದಾರೆ.
ಸಚಿವರು ಶಾಸಕರು ಹಾಗೂ ಸಂಸದರು ಸಹ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಡಿನ್ನರ್ ಸಭೆಯ ಮೂಲಕ ಸಂದೇಶ ರವಾನೆ ಸಾಧ್ಯತೆ ಎನ್ನಲಾಗುತ್ತಿದೆ. ಹಾಗಾಗಿ ದೆಹಲಿಯಲ್ಲಿನ ಸಭೆ ತೀವ್ರ ಕುತೂಹಲ ಮೂಡಿಸಿದೆ.







