ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ.
ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000/- ರೂ., 25,000/- ರೂ. ಹಾಗೂ 15,000/- ರೂ. ನಗದು ಬಹುಮಾನ ನೀಡಲಾಗುವುದು.
ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಕರ್ತರಿಗಾಗಿ ನೀಡುವ Accreditation Card ಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು. ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್‌ಗಳು ಇರಬಾರದು.