ಹಾವೇರಿ : ಜಮ್ಮು ಕಾಶ್ಮೀರದಲ್ಲಿ ನಿನ್ನೆ ಉಗ್ರರು ಪ್ರವಾಸಿಗರ ಮೇಲೆ ಭೀಕರ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಸುಮಾರು 30ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಅದರಲ್ಲಿ ಕನ್ನಡಿಗರು ಇಬ್ಬರು ಬಲಿಯಾಗಿದ್ದಾರೆ. ಈ ಒಂದು ದಾಳಿಯ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸುವ ಅವಶ್ಯಕತೆ ಇರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆರ್ಟಿಕಲ್ 370 ತೆರವುಗೊಳಿಸಿದ ನಂತರ ಕಾಶ್ಮೀರದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಿತ್ತು, ಈ ಪ್ರಾಂತ್ಯ ತನ್ನ ಕೈ ತಪ್ಪಿಹೋಗುತ್ತಿದೆ ಅಂತ ಪಾಕಿಸ್ತಾನಕ್ಕೆ ಹತಾಶೆ ಶುರುವಾಗಿತ್ತು, ಅದರ ಪರಿಣಾಮವೇ ನಿನ್ನೆ ಪಹೆಲ್ಗಾಮ್ ನಲ್ಲಿ ಉಗ್ರರ ದಾಳಿ ನಡೆದು 28 ಅಮಾಯಕ ಹಿಂದೂಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಕಳೆದ 10 ವರ್ಷಗಳ ಅವಧಿಯಲ್ಲಿ ಪ್ರಧಾನಿ ಮೋದಿಯವರು ಆ ಪ್ರದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ, ಅದು ಕೇಂದ್ರಾಡಳಿತ ಪ್ರದೇಶವಾಗಿ ಉಳಿದಿದ್ದರೆ ಇನ್ನಷ್ಟು ಅಬಿವೃದ್ಧಿ ನಡೆಯುತ್ತಿತ್ತು, ಚುನಾವಣೆ ನಡೆಸುವ ಅವಶ್ಯಕತೆ ಇರಲಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.