ತುಮಕೂರು : ಸೋಡಿಯಂ ಬಳಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ಬಾಸ್ ಖ್ಯಾತಿಯ ಡ್ರೋನ್ ಪ್ರತಾ ಪ್‌ನನ್ನು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಗುರುವಾರ ಬಂಧಿಸಿದ್ದರು. ಬಳಿಕ ನ್ಯಾಯಾಲಯದ ಹಾಜರುಪಡಿಸಿ, ವಿಚಾರಣೆ ನಡೆಸಿದ ಬಳಿಕ ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿತು.
ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಜಿಲ್ಲೆಯ ಮಧುಗಿರಿ ತಾಲೂಕು ಜನಕಲೋಟಿ ಗ್ರಾಮದ ಬಳಿ ನೀರಿಗೆ ಸೋಡಿಯಂ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್, ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದ್ದರು. ವಿಚಾರವಾಗಿ ಪೊಲೀಸರು ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಮತ್ತಷ್ಟು ಸ್ಪೋಟಕವಾದ ಮಾಹಿತಿಯನ್ನು ಪ್ರತಾಪ್ ಬಿಚ್ಚಿಟ್ಟಿದ್ದಾರೆ.
ಇದಕ್ಕೂ ಮೊದಲು 2 ಬಾರಿ ಸ್ಪೋಟ!
ವಿಚಾರಣೆ ವೇಳೆ ಡ್ರೋನ್ ಪ್ರತಾಪ್ ಹಲವು ಸಂಗತಿಗಳನ್ನು ಬಾಯಿಬಿಟ್ಟಿದ್ದಾರೆ. ಡ್ರೋನ್ ಪ್ರತಾಪ್ ವಿರುದ್ಧ ನೀರಿಗೆ ಸೋಡಿಯಂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೂ ಮುನ್ನ ಪ್ರತಾಪ್ ಈ ರೀತಿಯ ಹಲವು ಪ್ರಯೋಗಗಳನ್ನು ಮಾಡಿದ್ದರು ಎನ್ನಲಾಗಿದೆ. ಎರಡು ಬಾರಿ ಪ್ರಯೋಗ ಮಾಡಿ, ಯೂg ಟ್ಯೂಬ್ ಗೆ ಅಪ್ಲೋಡ್ ಮಾಡಿದ್ದರು ಎನ್ನಲಾಗಿದೆ. ದೊಡ್ಡ ಸೋಡಿಯಂ ಬಳಸಿ ಪ್ರಯೋಗ ಮಾಡಿದ ಬಳಿಕ ಅದನ್ನ ವಿಡಿಯೋ ಅಪ್ಲೋಡ್ ಮಾಡಿ, ಅದರ ಪ್ರಯೋಗದಿಂದ ಬಂದ ಹಣದಿಂದ ಸಮಾಜ ಕಾರ್ಯ ಮಾಡಲು ಬಳಕೆ ಮಾಡುವ ಉದ್ದೇಶದಿಂದ ಸೋಡಿಯಂ ಪ್ರಯೋಗ ಮಾಡಿರುವುದಾಗಿ ಪೊಲೀಸರ ಬಳಿ ಹೇಳಿಕೆ ನೀಡಿದ್ದಾರೆ ಡ್ರೋನ್ ಪ್ರತಾಪ್.