Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ಕೂಟಿ ಪಾಕೆಟ್‌ ನಲ್ಲಿ ಗೂಡು ಕಟ್ಟಿ ಮೊಟ್ಟೆಯಿಟ್ಟ ಗುಬ್ಬಚ್ಚಿ : ಬಿಸಿಲಿನ ಬೇಗೆಗೆ ಹಕ್ಕಿಯ ವಿಭಿನ್ನ ಐಡಿಯಾ.!

BIG NEWS : ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್!

BREAKING : ಮೇ ತಿಂಗಳಲ್ಲಿ ಭಾರತದ `GST’ ಸಂಗ್ರಹ ಶೇ. 3.2 ರಷ್ಟು ಏರಿಕೆ: ₹1.94 ಲಕ್ಷ ಕೋಟಿ ಆದಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್!
KARNATAKA

BIG NEWS : ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್!

By ಸುರೇಶ್‌

ಬೆಂಗಳೂರು : ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪಟ್ಟಾಭಿಷೇಕದ ಬೆನ್ನಲ್ಲೇ ಇದೀಗ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಕಸರತ್ತು ತೀವ್ರಗೊಂಡಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಮತ್ತು ಯಾರನ್ನು ಕೈಬಿಡಬೇಕು ಎನ್ನುವುದು ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆಡಳಿತ ಪಕ್ಷದಲ್ಲಿ ಸಚಿವ ಸ್ಥಾನಕ್ಕಾಗಿ ಒಳಗೊಳಗೇ ಭಾರಿ ಪೈಪೋಟಿ ಶುರುವಾಗಿದೆ.

ಈಗಾಗಲೇ ಪಕ್ಷದಲ್ಲಿರುವ ಹಿರಿಯ ನಾಯಕರು ಹಾಗೂ ಮೂರರಿಂದ ನಾಲ್ಕು ಬಾರಿ ಸತತವಾಗಿ ಗೆದ್ದು ಬಂದಿರುವ ಶಾಸಕರು ಸಚಿವ ಸ್ಥಾನಕ್ಕಾಗಿ ತೀವ್ರ ಕಸರತ್ತು ನಡೆಸುತ್ತಿದ್ದಾರೆ. ತಮಗೆ ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನ ಸಿಗಲೇಬೇಕು ಎಂದು ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರುತ್ತಿದ್ದು, ರಾಜಧಾನಿ ಬೆಂಗಳೂರಿನಿಂದ ದೆಹಲಿಯವರೆಗೂ ಲಾಬಿ ತಲುಪಿದೆ.

ವಿಧಾನಸಭೆ ಶಾಸಕರಷ್ಟೇ ಅಲ್ಲದೆ, ಇದೀಗ ವಿಧಾನ ಪರಿಷತ್ ಸದಸ್ಯರು (ಎಂಎಲ್‌ಸಿ) ಸಹ ತಮಗೂ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಪರಿಷತ್ ಸದಸ್ಯರ ಕೋಟಾದಡಿ ಕನಿಷ್ಠ ಮೂರು ಸಚಿವ ಸ್ಥಾನಗಳನ್ನು ನೀಡಬೇಕು ಎಂದು ಎಂಎಲ್‌ಸಿಗಳು ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದಾರೆ. ಇದು ಸದ್ಯದ ಪರಿಸ್ಥಿತಿಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ.

ಇವೆಲ್ಲದರ ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಯತೀಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಹೈಕಮಾಂಡ್ ಸಿದ್ದರಾಮಯ್ಯ ಅವರ ಬಣವನ್ನು ತೃಪ್ತಿಪಡಿಸಲು ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮತ್ತೊಂದೆಡೆ, ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಯುವ ಕಾಂಗ್ರೆಸ್ ಕೋಟಾದಡಿ ಯುವಕರಿಗೆ ಆದ್ಯತೆ ನೀಡಬೇಕು ಎಂದು ಹೈಕಮಾಂಡ್ ತಲುಪಿದ್ದಾರೆ. ಕೇರಳ ಮಾದರಿಯನ್ನು ಅನುಸರಿಸಿ ಯುವ ಕಾಂಗ್ರೆಸ್ ನಾಯಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ಈ ಕೋಟಾದಡಿ ಡಿ.ಕೆ. ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಯುವ ನಾಯಕ ಬಸನಗೌಡ ಬಾದರ್ಲಿ ಅವರ ಹೆಸರು ಮುಂಚೂಣಿಗೆ ಬಂದಿದೆ.

ಇದೇ ವೇಳೆ, ಹಾಲಿ ಸಚಿವರಾಗಿರುವ ಎನ್.ಎಸ್. ಬೋಸರಾಜು ಅವರು ಹೈಕಮಾಂಡ್ ಮಟ್ಟದಲ್ಲಿ ಭಾರಿ ಲಾಬಿ ನಡೆಸುತ್ತಿದ್ದಾರೆ. ತಮ್ಮನ್ನು ಸಚಿವ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ಅವರು ದೆಹಲಿ ನಾಯಕರ ಮೂಲಕ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿರುವುದು ಕಾಂಗ್ರೆಸ್ ಹೈಕಮಾಂಡ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

Share. Facebook Twitter LinkedIn WhatsApp Email

Related Posts

BREAKING : ದಾವಣಗೆರೆ ಬೈ ಎಲೆಕ್ಷನ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್? : ಸ್ಪೋಟಕ ಆಡಿಯೋ ವೈರಲ್

2 Mins Read

ಸಾಗರ ಶಾಸಕ ಗೋಪಾಲಕೃಷ್ಣ ಬೇಲೂರು ಅವರಿಗೆ ಸಚಿವ ಸ್ಥಾನ ನೀಡಲು ಗಣಪತಿ ಮಂಡಗಳಲೆ ಆಗ್ರಹ

2 Mins Read

GOOD NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ | guest teachers

1 Min Read
Recent News

ಸ್ಕೂಟಿ ಪಾಕೆಟ್‌ ನಲ್ಲಿ ಗೂಡು ಕಟ್ಟಿ ಮೊಟ್ಟೆಯಿಟ್ಟ ಗುಬ್ಬಚ್ಚಿ : ಬಿಸಿಲಿನ ಬೇಗೆಗೆ ಹಕ್ಕಿಯ ವಿಭಿನ್ನ ಐಡಿಯಾ.!

BIG NEWS : ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್!

BREAKING : ಮೇ ತಿಂಗಳಲ್ಲಿ ಭಾರತದ `GST’ ಸಂಗ್ರಹ ಶೇ. 3.2 ರಷ್ಟು ಏರಿಕೆ: ₹1.94 ಲಕ್ಷ ಕೋಟಿ ಆದಾಯ!

BREAKING : ದಾವಣಗೆರೆ ಬೈ ಎಲೆಕ್ಷನ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್? : ಸ್ಪೋಟಕ ಆಡಿಯೋ ವೈರಲ್

State News
KARNATAKA

BIG NEWS : ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್!

By ಸುರೇಶ್‌ KARNATAKA 2 Mins Read

ಬೆಂಗಳೂರು : ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪಟ್ಟಾಭಿಷೇಕದ ಬೆನ್ನಲ್ಲೇ…

BREAKING : ದಾವಣಗೆರೆ ಬೈ ಎಲೆಕ್ಷನ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್? : ಸ್ಪೋಟಕ ಆಡಿಯೋ ವೈರಲ್

ಸಾಗರ ಶಾಸಕ ಗೋಪಾಲಕೃಷ್ಣ ಬೇಲೂರು ಅವರಿಗೆ ಸಚಿವ ಸ್ಥಾನ ನೀಡಲು ಗಣಪತಿ ಮಂಡಗಳಲೆ ಆಗ್ರಹ

GOOD NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ | guest teachers

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.