ವಿಜಯಪುರ : ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂಗಳ ರಕ್ಷಣೆ ಮಾಡಲು ಆಗುತ್ತಿಲ್ಲ. ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಯ ಜನಿವಾರ ತೆಗೆಸಿದರು. ಇದು ಹಿಂದೂ ವಿರೋಧಿ ಸರಕಾರ. ಈ ಸರ್ಕಾರವನ್ನು ಎದುರಿಸುವ ಸಾಮರ್ಥ್ಯ ಬಿಜೆಪಿ ರಾಜ್ಯಾಧ್ಯಕ್ಷನಿಗೆ ಇಲ್ಲ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ವಿಫಲರಾಗಿದ್ದಾರೆ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿ ವೈ ವಿಜಯೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ಬದಲಾವಣೆ ಕುರಿತಂತೆ ವಿಜಯಪುರ ನಗರ ಉಚ್ಚಾಟಿತ ಬಿಜೆಪಿ ಶಾಸಕ ಯತ್ನಾಳ್ ಮಾತನಾಡಿ, ಪಕ್ಷದಲ್ಲಿ ಏನು ನಡೆದಿದೆ ಎಂಬುದು ನನಗೆ ಗೊತ್ತಿಲ್ಲ. ನಾನು ಪಕ್ಷದಿಂದ ಉಚ್ಚಾಟನೆಯಾದ ಬಳಿಕ ಯಾರ ಸಂಪರ್ಕದಲ್ಲೂ ಇಲ್ಲ. ಹಳ್ಳಿ ಹಳ್ಳಿಗಳಲ್ಲೂ ನನಗೆ ಉತ್ತಮ ಬೆಂಬಲ ಸಿಗುತ್ತಿದೆ. ಹಿಂದುತ್ವ ಉಳಿಯಲು ನಿರ್ಣಯ ಮಾಡಬೇಕು ಎಂದು ಹೇಳುತ್ತಿದ್ದಾರೆ. ಮೂರು ರಾಜಕೀಯ ಪಕ್ಷಗಳ ಮೇಲೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ.
ವಿಜಯದಶಮಿ ವರೆಗೂ ನಾನು ರಾಜ್ಯ ಪ್ರವಾಸ ಮಾಡುತ್ತೇನೆ. ನಾಳೆ ಹಾವೇರಿಯಲ್ಲಿ ಕೆ ಎಸ್ ಈಶ್ವರಪ್ಪ ನಾನು ಸಮಾವೇಶ ಮಾಡುತ್ತಿದ್ದೇವೆ. ಹಿಂದೂ ಯುವತಿಯರ ಮೇಲೆ ದೌರ್ಜನ್ಯ ಖಂಡಿಸಿ ಸಮಾವೇಶ ಮಾಡುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂಗಳ ರಕ್ಷಣೆ ಮಾಡಲು ಆಗುತ್ತಿಲ್ಲ. ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಯ ಜನಿವಾರ ತೆಗೆಸಿದರು.
ಇದು ಹಿಂದೂ ವಿರೋಧಿ ಸರಕಾರ. ಈ ಸರ್ಕಾರವನ್ನು ಎದುರಿಸುವ ಸಾಮರ್ಥ್ಯ ಬಿಜೆಪಿ ರಾಜ್ಯಾಧ್ಯಕ್ಷನಿಗೆ ಇಲ್ಲ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ವಿಫಲರಾಗಿದ್ದಾರೆ. ಜನಾಕ್ರೋಶ ಯಾತ್ರೆಗೆ ಆರ್ ಅಶೋಕ್ ಅಶ್ವಥ್ ನಾರಾಯಣ ಬರುತ್ತಿಲ್ಲ. ಕಾಟಾಚಾರಕ್ಕೆ ಜನಾಕ್ರೋಶ ಯಾತ್ರೆಗೆ ಶ್ರೀರಾಮುಲು ಬರುತ್ತಾರೆ. ವಿಜಯೇಂದ್ರ ಮೇಲೆ ಎಲ್ಲರಿಗೂ ಬೇಸರವಿದೆ ಎಂದು ಬಿಜೆಪಿಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.