ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಇಂದಿಗೆ ಒಂದು ವರ್ಷ ತುಂಬಿದೆ. ಇಂದು ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಭಾವಚಿತ್ರಕ್ಕೆ ಪತ್ನಿ ಪುತ್ರ ಸೇರಿ ಕುಟುಂಬಸ್ಥರು ನಮನ ಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಪೋಷಕರು ರೇಣುಕಾಸ್ವಾಮಿ ನೆನೆದು ಕಣ್ಣೀರಿಟ್ಟಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ ನಟ ದರ್ಶನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
2024 ರ ಜೂನ್ 11ರಂದು ನಟ ದರ್ಶನ್ ಅವರನ್ನು ಪೊಲೀಸರು ಬೆಳ್ಳಂಬೆಳಗ್ಗೆ ಬಂಧನ ಮಾಡಿದ್ದರು. ಮೈಸೂರಿನ ನಿವಾಸದಲ್ಲಿ ನಟ ದರ್ಶನ್ ಬಂಧನಕ್ಕೊಳಗಾಗಿದ್ದು, ಈ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು.