ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್ ಎನ್ನುವ ಸುಳಿವನ್ನು ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ. ಮೇ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ ಎಂಬುದಾಗಿ ಮಹತ್ವದ ಅಪ್ ಡೇಟ್ ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾತನಾಡಿದಂತ ಅವರು, ಬಿಜೆಪಿಯವರಿಗೆ ಬೆಂಗಳೂರಿನ ಅಭಿವೃದ್ಧಿ ಬೇಕಾಗಿಲ್ಲ. ಅವರಿಗೆ ವೋಟ್ ಮಾತ್ರವೇ ಬೇಕಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಅವರು ವಿರೋಧಿಸುತ್ತಿದ್ದಾರೆ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದರು.ಬಿಬಿಎಂಪಿ ಚುನಾವಣೆ ಮೇಯಲ್ಲಿ 100% ಆಗಲಿದೆ. ಗ್ರೇಟರ್ ಬೆಂಗಳೂರು ಆದರೇ ವಾರ್ಡ್ ಜಾಸ್ತಿ ಆಗಬಹುದು. 2 ರಿಂದ 3 ಪಾಲಿಕೆ ಆಗಬಹುದು. ಈಗಿನ ಬೆಂಗಳೂರನ್ನು ಒಬ್ಬ ಮೇಯರ್, ಕಮೀಷನರ್ ಆಡಳಿತ ಮಾಡಲು ಸಾಧ್ಯವಿಲ್ಲ ಎಂದರು.
ಬಿಬಿಎಂಪಿಗೆ ಮೇ ತಿಂಗಳಿನಲ್ಲಿ ಚುನಾವಣೆ ನಡೆಯಲಿದೆ. ಗ್ರೇಟರ್ ಬೆಂಗಳೂರಿಗೆ ಶಾಸಕ ರಿಜ್ವಾನ್ ಅರ್ಷದ್ ಅವರ ಅಧ್ಯಕ್ಷತೆಯ ಸಂಸದೀಯ ಸಮಿತಿ ವರದಿ ನೀಡಿದೆ. ಅದರ ಆಧಾರವಾಗಿ ವಿಧಾನಮಂಡಲದಲ್ಲಿ ಮಸೂದೆ ಮಂಡಿಸಲಾಗುವುದು. ಅಂಗೀಕಾರಗೊಂಡ ಬಳಿಕ ರಾಜ್ಯಪಾಲರ ಅನುಮೋದನೆ ನೀಡಬೇಕಿದೆ. ನಂತರ ಅದರ ಆಧಾರದ ಮೇಲೆ ಚುನಾವಣೆ ನಡೆಯಲಿದೆ ಎಂದರು.
ಗ್ರೇಟರ್ ಬೆಂಗಳೂರಿನಲ್ಲಿ ಸಾಕಷ್ಟು ಬದಲಾವಣೆಗಳಾಗಲಿವೆ. 2 ಅಥವಾ 3 ಪಾಲಿಕೆಗಳು ವಿಂಗಡಣೆಗಳಾಗಲಿವೆ. ಪ್ರತೀ ಪಾಲಿಕೆಯ ವಾರ್ಡ್‌ಗಳ ಸಂಖ್ಯೆ ಕೂಡ ವ್ಯತ್ಯಾಸವಾಗಲಿದೆ. ಈಗಿರುವ ಬೆಂಗಳೂರನ್ನು ಒಬ್ಬ ಆಯುಕ್ತ ಅಥವಾ ಒಬ್ಬ ಮೇಯರ್ ನಿಭಾಯಿಸಲು ಸಾಧ್ಯವಿಲ್ಲ. ಹೀಗಾಗಿ ಗ್ರೇಟರ್ ಬೆಂಗಳೂರು ಅನಿವಾರ್ಯ ಎಂದರು.