ಬೆಂಗಳೂರು : ಬೆಂಗಳೂರಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು ಉನ್ನತ ಮಟ್ಟದ ತನಿಖೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಬೆನ್ನಲ್ಲೇ, ಕೆಪಿಎಸ್‌ಸಿ ಮೂಲಕ 1000 ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ ಪರಮೇಶ್ವರ್ ಕಾರಾಗೃಹ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ನಿರ್ದೇಶನ ನೀಡಲಾಗಿದೆ. ಕೆಪಿಎಸ್ಸಿ ಮೂಲಕ ಅಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಹಾಯಕ ಅಧೀಕ್ಷಕರು ಸೇರಿದಂತೆ 1000 ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತದೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನೇಮಕಾತಿ ನಡೆಯಲಿದೆ ಸಿಬ್ಬಂದಿ ಕೊರತೆ ನೀಗಿದರೆ ಸಮರ್ಪಕವಾಗಿ ನಿರ್ವಹಿಸಬಹುದು ಎಂದು ಜಿ ಪರಮೇಶ್ವರ್ ತಿಳಿಸಿದರು.








