ಬೆಂಗಳೂರು : ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ 11 ಅಭಿಮಾನಿಗಳಲ್ಲಿ ಎಲ್ಲರೂ ಉಸಿರುಗಟ್ಟಿಯೇ ಮೃತಪಟ್ಟಿದ್ದಾರೆ ಎಂಬ ವಿಚಾರ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯಲ್ಲಿ ಬೆಳಕಿಗೆ ಬಂದಿದೆ. ಕೆಲವರ ದೇಹದಲ್ಲಿ ಮೂಳೆಗಳು ಮುರಿದಿವೆ. ಬೌರಿಂಗ್ ಆಸ್ಪತ್ರೆಯಲ್ಲಿ ಆರು ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಐದು ಮಂದಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
11 ಮಂದಿ ಮೃತಪಟ್ಟ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ 11 ಪ್ರತ್ಯೇಕ ಅಸಹಜ ಸಾವು(ಯುಡಿಆರ್) ಪ್ರಕರಣ ದಾಖಲಾಗಿದೆ. ಮೃತರ ಪಾಲಕರು ನೀಡಿದ ದೂರು ಆಧರಿಸಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿದ್ದಾರೆ.