ಬೆಂಗಳೂರು : ರಾಜ್ಯದಲ್ಲಿ ಶೀಘ್ರವೇ 14 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಉದ್ದೇಶಿಸಲಾಗಿದೆ. ಇದುವರೆಗೆ 3.63 ಲಕ್ಷ ಕಾರ್ಡ್ ರದ್ದಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಅನರ್ಹರ ಕಾರ್ಡ್ ಗಳನ್ನು ರದ್ದು ಮಾಡಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಅರ್ಹರಿಗೆ ಬಿಪಿಎಲ್ ಕಾರ್ಡ್ ವಿತರಣೆಗೆ ಯಾವುದೇ ತೊಂದರೆ ಇಲ್ಲ. ಒಂದು ವೇಳೆ ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದಲ್ಲಿ 24 ಗಂಟೆಯೊಳಗೆ ವಾಪಸ್ ಬಿಪಿಎಲ್ ಕಾರ್ಡ್ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಅನರ್ಹರ ಬಿಪಿಎಲ್ ಕಾರ್ಡ್ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹರ ಯಾವ ಕಾರ್ಡ್ಗಳೂ ರದ್ದಾಗುವುದಿಲ್ಲ, ಬಿಪಿಎಲ್ ಕಾರ್ಡ್ ಪಡೆಯಲು ಯಾರು ಅರ್ಹರು ಎನ್ನುವ ಬಗ್ಗೆ ಮಾನದಂಡಗಳಿದ್ದು, ಅದನ್ನು ಆಧರಿಸಿ ಕಾರ್ಡ್ ಗಳ ಪರಿಶೀಲನೆ ನಡೆಯಲಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.