ಚಿತ್ರದುರ್ಗ : ಹಸಿವಿನಿಂದ ಬಳಲುತ್ತಿರುವ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಈ ಒಂದು ಅನ್ನಭಾಗ್ಯ ಯೋಜನೆ ಜಾರಿ ಮಾಡಿದೆ. ಆದರೆ ಇದನ್ನು ಅದೆಷ್ಟೋ ಕಡೆ ದುರುಪಯೋಗಪಡಿಸಿಕೊಳ್ಳಲಾಗುತ್ತಿದ್ದು, ಇದೀಗ ಚಿತ್ರದುರ್ಗದಲ್ಲಿ ಬಡವರಿಗೆ ಸೇರಬೇಕಾಗಿದ್ದ ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿ ಹಾಗೂ ನಾಲ್ವರು ಆರೋಪಿಗಳನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹೌದು ಬಡವರಿಗೆ ಹಂಚಿಕೆ ಮಾಡಬೇಕಾದ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಐಮಂಗಲ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನ ಚಂದ್ರಶೇಖರ, ಗುರು, ವೀರೇಶ ಮತ್ತು
ಮುಜ್ಜು ಎಂದು ತಿಳಿದುಬಂದಿದೆ. ಅವರಿಂದ ಲಾರಿ ಮತ್ತು ಲಾರಿಯಲ್ಲಿದ್ದ ಸುಮಾರು 15 ಟನ್ ಪಡಿತರ ಅನ್ನ ಭಾಗ್ಯ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಅಕ್ರಮವಾಗಿ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿ ಸಾಗಾಟ ಮಾಡುತ್ತಿರುತ್ತಾರೆ ಎಂಬ ಖಚಿತವಾಗಿ ಮಾಹಿತಿ ಮೇರೆಗೆ ಗುಯಿಲಾಳು ಟೋಲ್ ಪ್ಲಾಜಾದಲ್ಲಿ ಐಮಂಗಲ ವೃತ್ತ ನಿರೀಕ್ಷಕರಾದ ಎನ್ ಗುಡ್ಡಪ್ಪ ಮತ್ತು ಐಮಂಗಲ ಠಾಣೆಯ ಪಿಎಸ್‌ಐ ಶ್ರೀಮತಿ ಎಂ. ಟಿ. ದೀಪು ಹಾಗೂ ಸಿಬ್ಬಂಧಿಯವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಈ ವೇಳೆ ಸುಮಾರು 5 ಟನ್ ನಷ್ಟು ಅನ್ನಭಾಗ್ಯ ಅಕ್ಕಿ ಇರುವುದು ಕಂಡು ಬಂದಿರುತ್ತದೆ. ನಂತರ ಸ್ಥಳಕ್ಕೆ ಹಿರಿಯೂರು ಅಹಾರ ಶಿರಸ್ತೇದಾರ್ ಅದ ಎನ್ ಲಿಂಗರಾಜು ರವರು ಭೇಟಿ ನೀಡಿ ಪರಿಶೀಲಿಸಿದಾಗ ಸರ್ಕಾರದ ಅನ್ನ ಭಾಗ್ಯ ಯೋಜನೆಯ ಅಕ್ಕಿ ಇರುವುದು ತಿಳಿದು ಬಂದಿದೆ. ಕೂಡಲೇ ಅವರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.