ಬೆಂಗಳೂರು : ರಾಜ್ಯದಲ್ಲಿರುವ 16,500 ಸರಕಾರಿ ಶಾಲೆಗಳಿಗೆ ಮಕ್ಕಳ ಊಟಕ್ಕಾಗಿ ಹೊಸ ಅಡುಗೆ ಪಾತ್ರೆ ವಿತರಣೆ ಮಾಡಲಾಗುತ್ತೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಇಂದು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ರಾಜ್ಯದ 16,500 ಸರಕಾರಿ ಶಾಲೆಗಳಿಗೆ ಹಳೆಯ ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ನಿಲ್ಲಿಸುವ ನಿರ್ಧಾರವನ್ನು ಸರಕಾರ ತೆಗೆದುಕೊಂಡಿದೆ. ಹಾಗಾಗಿ ಶೀಘ್ರದಲ್ಲಿಯೇ ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲಾಗುವುದು ಎಂದು ಹೇಳಿದರು.
ಸರಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮತ್ತು ಟಿವಿಗಳ ಬಳಕೆಯನ್ನು ಹೆಚ್ಚಿಸಲು ಸರಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಸುಮಾರು 46,000 ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗಿದೆ. ಇದರಿಂದ ಮಕ್ಕಳು ಸ್ಮಾರ್ಟ್ ಕ್ಲಾಸ್ ಗಳ ಸದುಪಯೋಗ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.