ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ 25 ಲಕ್ಷ ಕರಡು ಇ- ಖಾತಾಗಳು ಆನ್‌ಲೈನ್‌ನಲ್ಲಿ ಲಭ್ಯವಿದ್ದು, 2.71 ಲಕ್ಷ ಅಂತಿಮ ಇ-ಖಾತಾಗಳನ್ನು ವಿತರಿಸಲಾಗಿದೆ.
ನಾಗರಿಕರು https://bbmpeaasthi.karnataka.gov.in/ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದ್ದು, ಪಾಲಿಕೆ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ. ಪಾಲಿಕೆ ಸಹಾಯಕ ಕಂದಾಯ ಅಧಿಕಾರಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಅಂತಿಮ ಇ-ಖಾತಾ ಸಿಗುವ ವ್ಯವಸ್ಥೆ ಮಾಡಲಿದ್ದಾರೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ಅವರು ತಿಳಿಸಿದ್ದಾರೆ.