Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ

10/02/2026 6:06 AM

ರಾಜ್ಯಾದ್ಯಂತ ಎಲ್ಲಾ ಶಾಲೆ, ಅಂಗನವಾಡಿಗಳಲ್ಲಿ ಇಂದಿನಿಂದ `ರಾಷ್ಟ್ರೀಯ ಜಂತುಹುಳು ನಿವಾರಣಾ ಅಭಿಯಾನ ಆರಂಭ’ : ಸರ್ಕಾರದಿಂದ ಮಹತ್ವದ ಆದೇಶ

10/02/2026 6:04 AM

BIG NEWS : ಮನೆ ಖರೀದಿಸಿ `ಬಾಡಿಗೆ’ ಕೊಡುವವರಿಗೆ ಗುಡ್ ನ್ಯೂಸ್ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು.!

10/02/2026 5:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಾಳೆ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ : ಅರಣ್ಯ ಇಲಾಖೆಯ 49 ಅಧಿಕಾರಿ, ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರದಾನ
KARNATAKA

BIG NEWS : ನಾಳೆ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ : ಅರಣ್ಯ ಇಲಾಖೆಯ 49 ಅಧಿಕಾರಿ, ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರದಾನ

By kannadanewsnow5702/09/2024 12:34 PM

ಬೆಂಗಳೂರು : ಅರಣ್ಯ ಇಲಾಖೆಗೆ ಹೊಸದಾಗಿ ಆಯ್ಕೆಯಾಗಿರುವ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಾಗೂ ಗಣನೀಯ ಸೇವೆ ಸಲ್ಲಿಸಿದ 49 ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕವನ್ನು ನಾಳೆ (ಸೆ.3) ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಹೇಳಿಕೆಯಲ್ಲಿ ಅವರು, 2023-24ನೇ ಸಾಲಿನಲ್ಲಿ 310 ಅರಣ್ಯ ವೀಕ್ಷಕರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿತ್ತು. ಒಟ್ಟು 1,94,007 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಎಸ್.ಎಸ್.ಎಲ್.ಸಿ. ಮತ್ತು ತತ್ಸಮಾನ ಪರೀಕ್ಷೆಯಲ್ಲಿ ಗಳಿಸಿದ ಅತಿ ಹೆಚ್ಚು ಅಂಕ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ಮೂಲಕ ಪಾರದರ್ಶಕವಾಗಿ 267 ಅರ್ಹ ಅಭ್ಯರ್ಥಿಗಳು ಎಲ್ಲಾ ವೃತ್ತದಿಂದ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಮತ್ತು ಚಿಕ್ಕಮಗಳೂರು ವೃತ್ತದಲ್ಲಿ ಸ್ಥಳೀಯ ಮೂಲ ಆದಿವಾಸಿ ಜನಾಂಗದ ಅಭ್ಯರ್ಥಿಗಳಿಗೆ ಮೀಸಲಾತಿ ಇದ್ದು, ಈ ಸಮುದಾಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸದ ಕಾರಣ ಮತ್ತು ಇನ್ನಿತರ ತಾಂತ್ರಿಕ ಕಾರಣಗಳಿಂದ 43 ಹುದ್ದೆಗಳಿಗೆ ಸದ್ಯಕ್ಕೆ ನೇಮಕಾತಿ ಪತ್ರ ನೀಡಲಾಗುತ್ತಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

2022-23ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರದಾನ:

ಅರಣ್ಯ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆ, ಅರಣ್ಯ ಕೃಷಿ, ಅರಣ್ಯ ನಿರ್ವಹಣೆ, ತರಬೇತಿ, ಸಂಶೋಧನೆ, ಕಾರ್ಯಯೋಜನೆ, ಜನರ ಪಾಲ್ಗೊಳ್ಳುವಿಕೆ, ಅಭಿವೃದ್ಧಿ ಕಾರ್ಯ, ಮಾನವ- ಪ್ರಾಣಿ ಸಂಘರ್ಷ ನಿಯಂತ್ರಣ, ನಾವೀನ್ಯಪೂರ್ಣ ಉಪಕ್ರಮ ಅಳವಡಿಕೆ ಇತ್ಯಾದಿ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ 25 ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಪ್ರತಿವರ್ಷ ಗುರುತಿಸಿ 2017ರಿಂದ ಮುಖ್ಯಮಂತ್ರಿಗಳ ಪದಕ ನೀಡಲಾಗುತ್ತಿದ್ದು, 2022 ಮತ್ತು 2023ನೇ ಸಾಲಿನಲ್ಲಿ ಒಟ್ಟು 49 ಅಧಿಕಾರಿ, ಸಿಬ್ಬಂದಿಗೆ ಮುಖ್ಯಮಂತ್ರಿಗಳು ಪದಕ ಪ್ರದಾನ ಮಾಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

BIG NEWS : ನಾಳೆ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ : ಅರಣ್ಯ ಇಲಾಖೆಯ 49 ಅಧಿಕಾರಿ BIG NEWS: 267 forest watchers to get appointment letter tomorrow: 49 forest department officers staff to be awarded CM's medal ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರದಾನ
Share. Facebook Twitter LinkedIn WhatsApp Email

Related Posts

‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ

10/02/2026 6:06 AM2 Mins Read

ರಾಜ್ಯಾದ್ಯಂತ ಎಲ್ಲಾ ಶಾಲೆ, ಅಂಗನವಾಡಿಗಳಲ್ಲಿ ಇಂದಿನಿಂದ `ರಾಷ್ಟ್ರೀಯ ಜಂತುಹುಳು ನಿವಾರಣಾ ಅಭಿಯಾನ ಆರಂಭ’ : ಸರ್ಕಾರದಿಂದ ಮಹತ್ವದ ಆದೇಶ

10/02/2026 6:04 AM2 Mins Read

ದೇಶದ ಮಹಿಳೆಯರಿಗೆ ಗುಡ್‌ ನ್ಯೂಸ್‌: ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಸಿಗಲಿದೆ ₹20,000 ತನಕ ವೇತನ

10/02/2026 5:45 AM2 Mins Read
Recent News

‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ

10/02/2026 6:06 AM

ರಾಜ್ಯಾದ್ಯಂತ ಎಲ್ಲಾ ಶಾಲೆ, ಅಂಗನವಾಡಿಗಳಲ್ಲಿ ಇಂದಿನಿಂದ `ರಾಷ್ಟ್ರೀಯ ಜಂತುಹುಳು ನಿವಾರಣಾ ಅಭಿಯಾನ ಆರಂಭ’ : ಸರ್ಕಾರದಿಂದ ಮಹತ್ವದ ಆದೇಶ

10/02/2026 6:04 AM

BIG NEWS : ಮನೆ ಖರೀದಿಸಿ `ಬಾಡಿಗೆ’ ಕೊಡುವವರಿಗೆ ಗುಡ್ ನ್ಯೂಸ್ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು.!

10/02/2026 5:56 AM

BREAKING : ಟಿ20 ವಿಶ್ವಕಪ್ ನಲ್ಲಿ ಭಾರತದೊಂದಿಗೆ ಪಂದ್ಯ ಆಡಲು ಪಾಕಿಸ್ತಾನ ಅಸ್ತು.!

10/02/2026 5:50 AM
State News
KARNATAKA

‘ಮೈಸೂರು ಸ್ಯಾಂಡಲ್‌ ಸೋಪ್‌’ಗೆ ಹೊಸ ರೂಪ: ಇಂದಿನಿಂದ 2 ವರ್ಷ ‘ನಟಿ ತಮನ್ನಾ’ ಪ್ರಚಾರ ರಾಯಭಾರಿ

By kannadanewsnow0910/02/2026 6:06 AM KARNATAKA 2 Mins Read

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆ.ಎಸ್.ಡಿ.ಎಲ್) ತಯಾರಿಸುವ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆಯ ಅಂಗವಾಗಿ ಖ್ಯಾತ…

ರಾಜ್ಯಾದ್ಯಂತ ಎಲ್ಲಾ ಶಾಲೆ, ಅಂಗನವಾಡಿಗಳಲ್ಲಿ ಇಂದಿನಿಂದ `ರಾಷ್ಟ್ರೀಯ ಜಂತುಹುಳು ನಿವಾರಣಾ ಅಭಿಯಾನ ಆರಂಭ’ : ಸರ್ಕಾರದಿಂದ ಮಹತ್ವದ ಆದೇಶ

10/02/2026 6:04 AM

ದೇಶದ ಮಹಿಳೆಯರಿಗೆ ಗುಡ್‌ ನ್ಯೂಸ್‌: ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಸಿಗಲಿದೆ ₹20,000 ತನಕ ವೇತನ

10/02/2026 5:45 AM

BIG NEWS: ಇನ್ಮುಂದೆ ‘ಸೋಷಿಯಲ್ ಮೀಡಿಯಾ ಪೋಸ್ಟ್’ಗಳ ವಿರುದ್ಧ ‘FIR ದಾಖಲು’ ವೇಳೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ

10/02/2026 5:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.