ಬೆಂಗಳೂರು : ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆಯಾಗದ ಕಾರಣ ಹಲವಾರು ಮಹಿಳೆಯರು ಇದೀಗ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರು ಈ ತಿಂಗಳು 3 ಕಂತಿನ ಹಣ ಫಾಲಾನುಭವಿಗಳ ಖಾತೆಗೆ ಹಾಕುತ್ತೆವೆ ಎಂದು ಭರವಸೆ ನೀಡಿದರು.
ಅನ್ನಭಾಗ್ಯ ಗೃಹಲಕ್ಷ್ಮಿ ಯೋಜನೆ, ಹಣ ಜಮೆ ಆಗದ ವಿಚಾರವಾಗಿ ಬೆಂಗಳೂರಿನ ಹೆಚ್ ಎ ಎಲ್ ಏರ್ಪೋರ್ಟ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನಮ್ಮ ಸರ್ಕಾರದಲ್ಲಿ ಯಾವುದೇ ರೀತಿಯಾಗಿ ಹಣಕಾಸಿನ ಸಮಸ್ಯೆ ಇಲ್ಲ.ಎರಡು ಮೂರು ತಿಂಗಳಿಂದ ವಿಳಂಬ ಆಗಿದೆ ಆದರೆ ಯೋಜನೆಗಳನ್ನು ನಿಲ್ಲಿಸಲ್ಲ. ಈ ತಿಂಗಳು ಅನ್ನಭಾಗ್ಯ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಲಾಗುತ್ತೆ ಎರಡು ಮೂರು ತಿಂಗಳ ಹಣ ಒಂದೇ ಬಾರಿ ಖಾತೆಗಳಿಗೆ ಜಮೆ ಮಾಡುತ್ತೇವೆ ಎಂದು ತಿಳಿಸಿದರು.
ಗೃಹಲಕ್ಷ್ಮಿ ಹಣ ಮೂರು ತಿಂಗಳಿಂದ ಬಂದಿಲ್ಲ. ಈ ಹಣವನ್ನು ನಾವು ಹಾಕುತ್ತೇವೆ. ಗೃಹ ಲಕ್ಷ್ಮೀ ಯೋಜನೆಯ 3 ತಿಂಗಳ ಬಾಕಿ ಹಣ ಶೀಘ್ರದಲ್ಲೇ ಫಲಾನುಭವಿಗಳ ಅಕೌಂಟಿಗೆ ಹಾಕಲಿದ್ದೇವೆ.ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ ಎಂದು ಭರವಸೆ ನೀಡಿದ್ದಾರೆ. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹ ಪ್ರತಿಕ್ರಿಯಿಸಿದ್ದು, ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ ಎಂದರು.