Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಮೋತ್ತೇಜಕ, ಲೈಂಗಿಕ ಜೀವನವನ್ನು ಉತ್ತಮಗೊಳಿಸುವ 7 ಅದ್ಭುತ ಆಹಾರಗಳಿವು

03/05/2026 9:21 PM

ಸಂತೋಷದಾಯಕ ಲೈಂಗಿಕ ಜೀವನಕ್ಕೆ ‘ಫೋರ್‌ಪ್ಲೇ’ ಏಕೆ ಮುಖ್ಯ? ಇಲ್ಲಿವೆ ಪ್ರಮುಖ ಕಾರಣಗಳು

03/05/2026 9:18 PM

ಕಾರಿನ ಒಳಗಿನ ಕೆಟ್ಟ ವಾಸನೆಯಿಂದ ಮುಕ್ತಿ ಬೇಕೇ? ಈ 5 ಸುಲಭ ಉಪಾಯಗಳನ್ನು ಅನುಸರಿಸಿ!

03/05/2026 9:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕೋರ್ಟ್ ಆದೇಶದಂತೆ 301 ಎಕರೆ ಅರಣ್ಯ ಭೂಮಿ ವಶಕ್ಕೆ : ಸಚಿವ ಈಶ್ವರ ಖಂಡ್ರೆ ಸೂಚನೆ
KARNATAKA

BIG NEWS : ಕೋರ್ಟ್ ಆದೇಶದಂತೆ 301 ಎಕರೆ ಅರಣ್ಯ ಭೂಮಿ ವಶಕ್ಕೆ : ಸಚಿವ ಈಶ್ವರ ಖಂಡ್ರೆ ಸೂಚನೆ

By kannadanewsnow5727/09/2024 9:55 AM

ಬೆಂಗಳೂರು: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕಗ್ಗಲಿ ಕಾವಲು ಪ್ರದೇಶದ ಸರ್ವೆ ನಂ.1ರಿಂದ 22ರವರೆಗಿನ 301.07 ಎಕರೆ ಕಿರು ಅರಣ್ಯ ಭೂಮಿಯನ್ನು ನ್ಯಾಯಾಲಯದ ಆದೇಶದಂತೆ ಮರಳಿ ವಶಕ್ಕೆ ಪಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ರಾಮಕೃಷ್ಣೇಗೌಡ ಎಂಬುವವರು 2000ದಲ್ಲಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಡಬ್ಲ್ಯು.ಪಿ. 11835/2000)ಗೆ ಸಂಬಂಧಿಸಿದಂತೆ ಕೋರ್ಟ್ 2009ರಲ್ಲಿಯೇ ಎಲ್ಲ ಅನಧಿಕೃತ ಮಂಜೂರಾತಿಯನ್ನು ರದ್ದು ಮಾಡಿಸಿ, ಭೂಮಿಯನ್ನು ಯಥಾವತ್ ಅರಣ್ಯವಾಗಿ ಉಳಿಸಲು ತೀರ್ಪಿತ್ತಿದ್ದರೂ ಕ್ರಮ ವಹಿಸದ ಕಾನೂನು ವಿಭಾಗದ ಎಲ್ಲ ಎಪಿಸಿಸಿಎಫ್ ಗಳು ಮತ್ತು ಹಾಸನ ಡಿಸಿಎಫ್ ಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ನೀಡಿರುವ ಟಿಪ್ಪಣಿಯಲ್ಲಿ ಸಚಿವರು ಸದರಿ ಜಮೀನನ್ನು ವಶಕ್ಕೆ ಪಡೆಯಲು ಕ್ರಮ ವಹಿಸಲು ಮತ್ತು ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವ ಎಲ್ಲ ಎಪಿಸಿಸಿಎಫ್ ಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ.

1940ರ ಜನವರಿ 15ರಂದು ಚನ್ನರಾಯಪಟ್ಟಣ ತಾಲೂಕು ಕಗ್ಗಲಿ ಕಾಲು ಪ್ರದೇಶವನ್ನು ಕಿರು ಅರಣ್ಯ ಎಂದು ಅಂದಿನ ಮಹಾರಾಜರ ಆಳ್ವಿಕೆಯಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ ಸದರಿ ಕಿರು ಅರಣ್ಯ ಜಮೀನನ್ನು ಅಕ್ರಮವಾಗಿ ದರಕಾಸ್ತು ಮಂಜೂರು ಮಾಡಲಾಗಿತ್ತು. ಈ ವಿರುದ್ಧ ರಾಮಕೃಷ್ಣೇಗೌಡ ಬಿನ್ ಏರೇಗೌಡ ಅವರು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅಂದಿನ ಮುಖ್ಯ ನ್ಯಾಯಮೂರ್ತಿ ಪಿ.ಡಿ. ದಿನಕರನ್ ಮತ್ತು ಮೋಹನ ಶಾಂತನಗೌಡರ್ ಅವರಿದ್ದ ವಿಭಾಗೀಯ ಪೀಠ 2009ರ ನವೆಂಬರ್ 6ರಂದು ಎಲ್ಲಾ ದರಕಾಸ್ತು ಮಂಜೂರಾತಿಗಳನ್ನು ರದ್ದು ಮಾಡಿ ಕಗ್ಗಲಿ ಕಾವಲು ಸರ್ವೆ ನಂ.1ರಿಂದ 22ರವರೆಗಿನ 331.07 ಎಕರೆ ಪ್ರದೇಶವನ್ನು ಯಥಾವತ್ ಅರಣ್ಯವಾಗಿ ಉಳಿಸುವಂತೆ ಆದೇಶ ನೀಡಿತ್ತು. ಬಳಿಕ ಹಾಸನ ಜಿಲ್ಲೆಯ ಕೆಲವು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಚನ್ನರಾಯಪಟ್ಟಣ ತಹಶೀಲ್ದಾರರಿಗೆ ಪತ್ರ ಬರೆದಿರುವುದನ್ನು ಬಿಟ್ಟರೆ ಈ ಭೂಮಿಯನ್ನು ಮರಳಿ ವಶಕ್ಕೆ ಪಡೆದು ಅರಣ್ಯ ಬೆಳೆಸುವ ಪ್ರಯತ್ನವನ್ನೇ ಮಾಡದಿರುವ ಬಗ್ಗೆ ಅರಣ್ಯ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

BIG NEWS : 301 acres of forest land seized as per court order : Minister Ishwara Khandre notice BIG NEWS : ಕೋರ್ಟ್ ಆದೇಶದಂತೆ 301 ಎಕರೆ ಅರಣ್ಯ ಭೂಮಿ ವಶಕ್ಕೆ : ಸಚಿವ ಈಶ್ವರ ಖಂಡ್ರೆ ಸೂಚನೆ
Share. Facebook Twitter LinkedIn WhatsApp Email

Related Posts

ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್

03/05/2026 8:36 PM2 Mins Read

ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

03/05/2026 8:34 PM1 Min Read

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM1 Min Read
Recent News

ಕಾಮೋತ್ತೇಜಕ, ಲೈಂಗಿಕ ಜೀವನವನ್ನು ಉತ್ತಮಗೊಳಿಸುವ 7 ಅದ್ಭುತ ಆಹಾರಗಳಿವು

03/05/2026 9:21 PM

ಸಂತೋಷದಾಯಕ ಲೈಂಗಿಕ ಜೀವನಕ್ಕೆ ‘ಫೋರ್‌ಪ್ಲೇ’ ಏಕೆ ಮುಖ್ಯ? ಇಲ್ಲಿವೆ ಪ್ರಮುಖ ಕಾರಣಗಳು

03/05/2026 9:18 PM

ಕಾರಿನ ಒಳಗಿನ ಕೆಟ್ಟ ವಾಸನೆಯಿಂದ ಮುಕ್ತಿ ಬೇಕೇ? ಈ 5 ಸುಲಭ ಉಪಾಯಗಳನ್ನು ಅನುಸರಿಸಿ!

03/05/2026 9:09 PM

ಭಾರತದಲ್ಲಿ ಹೆಚ್ಚುತ್ತಿದೆ ‘ಸ್ಲೀಪ್ ಡಿವೋರ್ಸ್’ ಕ್ರೇಜ್: ದಂಪತಿಗಳು ಪ್ರತ್ಯೇಕವಾಗಿ ಮಲಗಲು ಬಯಸುತ್ತಿರುವುದೇಕೆ?

03/05/2026 9:01 PM
State News
KARNATAKA

ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್

By kannadanewsnow0903/05/2026 8:36 PM KARNATAKA 2 Mins Read

ಮಂಡ್ಯ : ಜಿಲ್ಲೆಯಲ್ಲಿನ ಪುಸ್ತಕದ ಮನೆಯೊಂದು ಜಿಲ್ಲೆ ಮತ್ತು ರಾಜ್ಯವನ್ನು ದಾಟಿ ರಾಷ್ಟ್ರದ ರಾಜಧಾನಿ ದೆಹಲಿವರೆವಿಗೂ ತಲುಪಿರುವುದು ಶ್ಲಾಘನೀಯ ಕಾರ್ಯವೆಂದು…

ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

03/05/2026 8:34 PM

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM

Watch Video: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಳೆನೀರು ತುಂಬಿದ್ದ ಬೊಲೆರೊ ವಾಹನ ಪಲ್ಟಿ: ಭಯಾನಕ ವೀಡಿಯೋ ಇಲ್ಲಿದೆ

03/05/2026 7:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.