ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಇದೀಗ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 381 ಹೊಸ ಪ್ರಕಾರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಹೌದು ಇದೀಗ ಸದ್ಯ ರಾಜ್ಯದಲ್ಲಿ 88 ಡೆಂಘಿ ಕೇಸ್ ಗಳು ಸಕ್ರಿಯವಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 171 ಕೇಸ್ ಸಕ್ರಿಯವಾಗಿದ್ದ ಪ್ರಸ್ತುತ ರಾಜ್ಯದಲ್ಲಿ ಇಲ್ಲಿಯವರೆಗೆ 8221 ಪ್ರಕರಣಗಳು ಇಲ್ಲಿವರ್ಗೆ ಏರಿಕೆಯಾಗಿ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಬಹಿರಂಗವಾಗಿದೆ.
ಅಲ್ಲದೆ ರಾಜ್ಯದ ಗಡಿ ಭಾಗದಲ್ಲಿ ಕೂಡ ಡೆಂಘಿ ಪ್ರಕರಣಗಳು ಹೆಚ್ಚಿದ್ದು, ಬೀದರ್ ಜಿಲ್ಲೆಯಲ್ಲಿ ಕಳೆದ 2 ದಿನಗಳಲ್ಲಿ 6 ಡೆಂಘಿ ಪ್ರಕರಣಗಳು ಪತ್ತೆಯಾಗಿವೆ. ಆದ್ದರಿಂದ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಸೋಂಕು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ.