ಬೆಂಗಳೂರು : ರಾಜ್ಯದ ವಿವಿಧೆಡೆ 43 ಸ್ವಯಂಚಾಲಿತ ಡ್ರೈವಿಂಗ್ ಟೆಸ್ಟ್ ಟ್ರ್ಯಾಕ್, 11 ಟೆಸ್ಟಿಂಗ್ ಕೇಂದ್ರಗಳನ್ನು ಈ ವರ್ಷದಲ್ಲಿ ಸ್ಥಾಪನೆ ಮಾಡಲಾಗುತ್ತೆ. ಸ್ವಯಂಚಾಲಿತ ಡ್ರೈವಿಂಗ್ ಟೆಸ್ಟ್ ಟ್ರ್ಯಾಕ್‌ಗಳನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆರಂಭಿಸುತ್ತಿರುವುದು ದೇಶದಲ್ಲೇ ಮೊದಲು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಸಂಬಂಧ ಏಳೆಂಟು ಜಿಲ್ಲೆಗಳಲ್ಲಿ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಉಳಿದೆಡೆ ಕೆಲಸ ಪ್ರಗತಿಯಲ್ಲಿದೆ. ಇದು ಕಾರ್ಯಾರಂಭವಾದರೆ ಡ್ರೈವಿಂಗ್ ಲೈಸೆನ್ಸ್ ಪರೀಕ್ಷಾ ಪ್ರಕ್ರಿಯೆಯು ಸೆನ್ಸಾರ್ ಮೂಲಕ ಸ್ವಯಂಚಾಲಿತವಾಗಿ ನಿರ್ವಹಣೆಯಾಗಲಿದೆ ಎಂದು ಸಚಿವರು ತಿಳಿಸಿದರು.
ಅದೇ ರೀತಿ ಸ್ವಯಂಚಾಲಿತ ಟೆಸ್ಟಿಂಗ್ ಸೆಂಟರ್‌ಗಳ ಮೂಲಕ ವಾಹನಗಳ ಫಿಟ್ನೆಸ್ ಸರ್ಟಿಫಿಕೆಟ್, ಆರ್‌ಆರ್ ನವೀಕರಣ ಇತ್ಯಾದಿ ಕೆಲಸಗಳನ್ನು ನಿರ್ವಹಿಸಲಾಗುತ್ತದೆ. ಇದರಿಂದ ಡ್ರೈವಿಂಗ್ ಲೈಸೆನ್ಸ್ ಪರೀಕ್ಷಾ ಪ್ರಕ್ರಿಯೆಯು ಸೆನ್ಸಾರ್ ಮೂಲಕ ಸ್ವಯಂಚಾಲಿತವಾಗಿ ನಿರ್ವಹಣೆಯಾಗಲಿದೆ ಎಂದು ತಿಳಿಸಿದರು.