ಬೆಂಗಳೂರು : ರಾಜ್ಯದಲ್ಲಿ ಒಂದೇ ದಿನ ಹಾಸನ ಸೇರಿದಂತೆ ವಿವಿಧ ಕಡೆಗಳ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 51ಜನರು ಸಾವನ್ನಪ್ಪಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಒಂದೇ ದಿನ ರಸ್ತೆ ಅಪಘಾತದಲ್ಲಿ 51 ಜನರು ಸಾವನ್ನಪ್ಪಿರುವುದು ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ಅತಿ ಹೆಚ್ಚಿನ ಸಾವಿನ ಪ್ರಮಾಣವಾಗಿದೆ.
ಅಪಘಾತದ ಕುರಿತು ಟ್ವೀಟ್ ಮಾಡಿ ರಸ್ತೆ ಸುರಕ್ಷತೆ ನಿಯಮಗಳನ್ನು ಪಾಲಿಸುವಂತೆ ಎಡಿಜಿಪಿ ಅಲೋಕ್ ಟ್ವೀಟ್ ಮಾಡಿದ್ದು, ಅಪಘಾತಗಳಲ್ಲಿ ಸಾವಿನ ಪ್ರಮಾಣ ಏರಿಕೆ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಹಾಸನ ಸೇರಿದಂತೆ ರಾಜ್ಯ ವ್ಯಾಪ್ತಿ 24 ತಾಸಿನಲ್ಲಿ 51 ಮಂದಿ ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ಅಪಘಾತ ದುರಂತಗಳಲ್ಲಿ ಸಾವಿನ ಪ್ರಮಾಣದ ಅತಿ ಹೆಚ್ಚಿನ ದಾಖಲೆಯಾಗಿದೆ. ಈ ಅಪಘಾತಗಳಿಗೆ ಅತೀ ವೆಗ ಹಾಗೂ ಅಜಾಗರೂಕ ಚಾಲನೆಯೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದ್ದಾರೆ. ರಸ್ತೆ ಸುರಕ್ಷತೆ ಬಗ್ಗೆ ಜನರು ಅರಿಯಬೇಕು. ಸಂಚಾರ ನಿಯಮ ಪಾಲಿಸಿದ್ರೆ ಜೀವ ರಕ್ಷಣೆ ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.
6 persons killed in Hassan car accident
In last 24 hrs 51 lives lost in road accidents , one of the highest toll in recent past
Many of these caused due to rash & reckless driving
“#Roadsafety needs responsible behaviour from all the stakeholders” pic.twitter.com/JHYy1vC3CJ
— alok kumar (@alokkumar6994) May 26, 2024