ಬೆಂಗಳೂರು : ರಾಜ್ಯದ 545 ಪಿಎಸ್ ಐ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟಿಸಲು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪಿಎಸ್ ಐ ಪರೀಕ್ಷೆ ಬರೆದ ಅಭ್ಯರ್ಥಿಗಳು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗೆ ರಕ್ತದಲ್ಲಿ ಪತ್ರಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನವರಿಯಲ್ಲಿ ನಡೆದಿದ್ದ ಮರುಪರೀಕ್ಷೆಗೆ ಈವರೆಗೆ ಪಿಎಸ್ ಐ ಹುದ್ದೆಗಳ ನೇಮಕಾತಿ ಆಯ್ಕೆ ಪಟ್ಟಿ ವಿಳಂಬ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ರಕ್ತದಲ್ಲಿ ಪತ್ರ ಬರೆದು ಆಯ್ಕೆ ಪಟ್ಟಿ ಪ್ರಕಟಿಸುವಂತೆ ಒತ್ತಾಯಿಸಿದ್ದಾರೆ.
ಪಿಎಸ್ ಐ ಹುದ್ದೆಗಳ ಆಯ್ಕೆಪಟ್ಟಿಯನ್ನು ಮಾರ್ಚ್ ನಲ್ಲಿ ಪ್ರಕಟವಾಗಬೇಕಿತ್ತು, ಆದರೆ ಈವರೆಗೂ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಿಲ್ಲ.ಹೀಗಾಗಿ ಅಭ್ಯರ್ಥಿಗಳು ಗೃಹ ಸಚಿವ ಪರಮೇಶ್ವರ್ ಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.