ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಹಾಗು ಬಿಜೆಪಿ ಸಂಸದ ಸುಧಾಕರ್ ನಡುವೆ ಆಗಾಗ ಮುಸುಕಿನ ಗುದ್ದಾಟ ನಡೆಯುತ್ತಿರುತ್ತೆ. ಕಳೆದ 2024 ಸೆಪ್ಟೆಂಬರ್ ನಲ್ಲಿ ಚಿಕ್ಕಬಳ್ಳಾಪುರ ನಗರಸಭಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆದಿತ್ತು. ಸುಧಾಕರ್ ಬೆಂಬಲಿತರೇ ಅಧ್ಯಕ್ಷ-ಉಧ್ಯಾಕ್ಷರಾಗಿ ಆಯ್ಕೆಯಾಗಿದ್ದರು.ಇದಕ್ಕೆ ಅಡ್ಡಮತದಾನ ಮಾಡುವ ಮೂಲಕ ಕಾಂಗ್ರೆಸ್ ಸದಸ್ಯರೇ ಸುಧಾಕರ್ ಬೆಂಬಲಿತರು ಅಧ್ಯಕ್ಷ, ಉಪಾದ್ಯಕ್ಷರಾಗುವಂತೆ ಮಾಡಿದ್ದರು .
ಆದರೆ ಇದೀಗ ಅಧ್ಯಕ್ಷ-ಉಪಾದ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದ ಕಾಂಗ್ರೆಸ್ನ 6 ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿಗಳ ನ್ಯಾಯಾಲದ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 12 , 2024 ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆದಿತ್ತು. ಆ ಚುನಾವಣೆಯಲ್ಲಿ ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಡಾ ಕೆ ಸುಧಾಕರ್ ಇಬ್ಬರು ಸಹ ಚಿಕ್ಕಬಳ್ಳಾಪುರ ನಗರಸಭೆಯ ಗದ್ದುಗೆ ನಮ್ಮವರೇ ಹಿಡಿಯಬೇಕು ಎಂದು ಪ್ರದೀಪ್ ಈಶ್ವರ್ ಸುಧಾಕರ್ ನಡುವೆ ತೀವ್ರ ಪೈಪೋಟಿ ಇತ್ತು.
ಈ ವೇಳೆ ಕಾಂಗ್ರೆಸ್ನ 06 ಜನ ಸದಸ್ಯರೇ ಬಿಜೆಪಿ ಅಭ್ಯರ್ಥಿಗಳ ಪರ ಮತ ಚಲಾವಣೆ ಮಾಡಿ ಸಂಸದ ಸುಧಾಕರ್ ಬೆಂಬಲಿಗರ ಗೆಲುವಿಗೆ ಜೈಕಾರ ಹಾಕಿದ್ದರು.ಇದರಿಂದ ಕೆರಳಿದ ಶಾಸಕ ಪ್ರದೀಪ್ ಈಶ್ವರ್, ಜಿಲ್ಲಾಧಿಕಾರಿಗಳ ನ್ಯಾಯಾಲಯದ ಮೊರೆ ಹೋಗಿದ್ದು, ವಿಪ್ ಜಾರಿ ಮಾಡಿದ್ದರೂ ಸಹ ಅಡ್ಡಮತದಾನ ಮಾಡಿದ್ದಾರೆ. ಈ ಮೂಲಕ ವಿಪ್ ಉಲ್ಲಂಘನೆ ಮಾಡಿದ್ದು, ಇವರನ್ನು ಸದಸ್ಯತ್ವದಿಂದ ಅನರ್ಹಗೊಳಿಸಬೇಕೆಂದು ಮನವಿ ಮಾಡಿದ್ದರು.
ಇದನ್ನು ಪುರಸ್ಕರಿಸಿದ ಜಿಲ್ಲಾಧಿಕಾರಿಗಳ ನ್ಯಾಯಾಲವು, ಅಡ್ಡಮತದಾನ ಮಾಡಿದ್ದ ಆರು ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ಆದೇಶಿಸಿದೆ.ಚಿಕ್ಕಬಳ್ಳಾಪುರ ನಗರಸಭೆಯ 2 ನೇ ವಾರ್ಡಿನ ಸದಸ್ಯೆ ರತ್ನಮ್ಮ, 22 ನೇ ವಾರ್ಡಿನ ಸ್ವಾತಿ ಮಂಜುನಾಥ್, 24 ನೇ ವಾರ್ಡಿನ ಅಂಬಿಕಾ, 27 ನೇ ವಾರ್ಡಿನ ನೇತ್ರಾವತಿ, 07 ನೇ ವಾರ್ಡಿನ ಸತೀಶ್, ಹಾಗೂ 13 ನೇ ವಾರ್ಡಿನ ನಿರ್ಮಲಾಪ್ರಭುರನ್ನ ಅನರ್ಹಗೊಳಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ನ್ಯಾಯಾಲಯ ಆದೇಶ ಮಾಡಿದೆ.