ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಪಲ್ಟಿಯಾಗಿ ಆರು ಮಂದಿಗೆ ಗಂಭೀರವಾಗಿ ಗಾಯಗಳಾಗಿದ್ದು, ಸುಮಾರು 25ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ನರಿಪುರ ಎಂಬಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಕ್ಯಾಂಟರ್ ನಲ್ಲಿ ಮೇಕೆಗಳು ಹಾಗೂ ಕುರಿಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ನಿಯಂತ್ರಣ ಕಳೆದು ಕ್ಯಾಂಟರ್ ಪಲ್ಟಿಯಾಗಿದೆ. ಗಾಯಗೊಂಡ ಆರು ಜನರನ್ನು ತಕ್ಷಣ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಘಟನೆ ಸ್ಥಳಕ್ಕೆ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಕುರಿತು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








