ವಿಜಯಪುರ : ಕಾಂಗ್ರೆಸ್ ನ 60 ಮಂದಿ ಶಾಸಕರು ಬಿಜೆಪಿಗೆ ಬರಲು ಸಿದ್ದರಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇವರಾಣೆ ಮಾಡಿ ಹೇಳುತ್ತೇನೆ. ಈಗಲೂ 60 ಮಂದಿ ಶಾಸಕರು ಬಿಜೆಪಿಗೆ ಬರಲು ಸಿದ್ದರಿದ್ದಾರೆ. ಆದರೆ ಕಾಂಗ್ರೆಸ್ ಶಾಸಕರು ಬರಬೇಕು ಎನ್ನುವ ಇಚ್ಛೆ ನಮಗೆ ಇಲ್ಲ. ಅವರು ಬಂದ್ರೆ ಬಿಜೆಪಿಯ ಸಿದ್ಧಾಂತ ಹಾಳಾಗುತ್ತವೆ. ಹಿಂದೂಗಳ ಮೇಲೆ ಅತ್ಯಾಚಾರವಾಗುತ್ತದೆ. ಲವ್ ಜಿಹಾದ್ ನಡೆಯುತ್ತದೆ. ಹೀಗಾಗಿ ಇದ್ಯಾವುದು ಬೇಡ ಅಂತ ಸುಮ್ಮನಿದ್ದೇವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಿಂದ ಬಿಜೆಪಿಗೆ ಬರಲು 60 ಶಾಸಕರು ಸಿದ್ದರಿದ್ದಾರೆ. ಆದರೆ. ಕಾಂಗ್ರೆಸ್ ಗೆ ಜನರು ಐದು ವರ್ಷ ಅಧಿಕಾರ ಕೊಟ್ಟಿದ್ದಾರೆ. ನಾವು ಯಾವುದೇ ಆಪರೇಷನ್ ಮಾಡಲು ಮುಂದಾಗಿಲ್ಲ ಎಂದು ಹೇಳಿದ್ದಾರೆ.