ಬೆಳಗಾವಿ : ರಾಜ್ಯದ ಗ್ರಾಮೀಣ ಭಾಗದ ರಸ್ತೆಗಳ ಅಭವೃದ್ಧಿಗಳಡಿ ಪಕ್ಷಾತೀತವಾಗಿ ಎಲ್ಲಾ ಶಾಸಕರುಗಳ ಕ್ಷೇತ್ರಗಳಿಗೆ ಒಟ್ಟು 6,000 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಮೇಲಿನ ಚರ್ಚೆಗೆ ಉತ್ತರ ನೀಡುವಾಗ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್-ಇ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಕ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಯೋಜನೆಗಳಡಿ ಪಕ್ಷಾತೀತವಾಗಿ ಎಲ್ಲಾ ಶಾಸಕರುಗಳ ಕ್ಷೇತ್ರಗಳಿಗೆ 6,000 ಕೋಟಿ ರೂ. ಅನುದಾನ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.
ಅಪೆಂಡಿಕ್ಸ್-ಇ ಅಡಿ ವಿವಿಧ ಯೋಜನೆಗಳಿಗೆ 4,000 ಕೋಟಿ ರೂ ಮತ್ತು ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಎಲ್ಲಾ ಕ್ಷೇತ್ರಗಳಿಗೂ ಒಟ್ಟಾರೆ 2,000 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.