ಬೆಂಗಳೂರು : ಬೆಂಗಳೂರಿನಲ್ಲಿ ನಡೆದಿದ್ದ 7.11 ಕೋಟಿ ರೂ ದರೋಡೆ ಪ್ರಕರಣದಲ್ಲಿ ಪೊಲೀಸರು 7.01 ಕೋಟಿ (ಶೇ.98) ಹಣವನ್ನು ರಿಕವರಿ ಮಾಡಿದ್ದಾರೆ. ಈವರೆಗೆ 9 ಆರೋಪಿಗಳನ್ನು ಬಂಧಿಸಿದ್ದಾರೆ. ನಗರ ಪೊಲೀಸ್ ಆಯುಕ್ತರು ತಂಡದ ಕಾರ್ಯವನ್ನು ಶ್ಲಾಘಿಸಿದ್ದು, ಹೆಚ್ಚುವರಿ ಬಹುಮಾನ ಘೋಷಿಸಿದ್ದಾರೆ. ಇನ್ನು CMS ಸಿಬ್ಬಂದಿ ವಿಚಾರಣೆ ವೇಳೆ ಮತ್ತೊಂದು ನಿರ್ಲಕ್ಷದ ಕುರಿತು ಬಯಲಾಗಿದೆ.
ಹೌದು ಕೋಟ್ಯಾಂತರ ದರೋಡೆ ನಡೆದರೂ ಸಹ ಸಿಎಂಸಿ ಸಿಬ್ಬಂದಿಗಳಿಗೆ ಊಟವೆ ಮುಖ್ಯವಾಗಿತ್ತು. ಸಿದ್ದಾಪುರ ಠಾಣೆ ಪೊಲೀಸರು CMS ವಾಹನ ಸಿಬ್ಬಂದಿ ವಿಚಾರಣೆ ವೇಳೆ ಮತ್ತಷ್ಟು ಸಂಗತಿಗಳು ಬೆಳಕಿಗೆ ಬಂದಿವೆ. ಅಷ್ಟು ದೊಡ್ಡ ದರೋಡೆ ನಡೆದಿದ್ದರೂ ಸಿಬ್ಬಂದಿಗೆ ಊಟವೇ ಮುಖ್ಯವಾಗಿತ್ತು.
ನ.19ರಂದು CMS ವಾಹನ ಅಡ್ಡಗಟ್ಟಿ 7.11 ಕೋಟಿ ರೂ ದರೋಡೆ ನಡೆದಿತ್ತು. ಇನ್ನೋವಾ ಕಾರಿನಲ್ಲಿ ಕಸ್ಟೋಡಿಯನ್, ಗನ್ಮ್ಯಾನ್ ಕರೆದೊಯ್ದಿದ್ದರು. ಮಾರ್ಗಮಧ್ಯೆ ಕಸ್ಟೋಡಿಯನ್, ಗನ್ಮ್ಯಾನ್ ಇಳಿಸಿ ಗ್ಯಾಂಗ್ ತೆರಳಿತ್ತು. ದರೋಡೆಕೋರರು ಇಳಿಸಿದ್ದ ಸ್ಥಳದಿಂದ ಠಾಣೆಗೆ ಕೂಗಳತೆ ದೂರದಲ್ಲಿದ್ದರು ಈ ಬಗ್ಗೆ CMS ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ.
ದರೋಡೆ ನಡೆದು 2 ಗಂಟೆ ನಂತರ ಪೊಲೀಸರಿಗೆ ವಿಚಾರ ಗೊತ್ತಾಗಿತ್ತು. ಇಷ್ಟೊತ್ತು ಏನು ಮಾಡುತ್ತಿದ್ರಿ ಎಂದು ಪೊಲೀಸರು ವಿಚಾರಣೆ ಮಾಡಿದ್ದಾರೆ. ಊಟದ ಸಮಯ ಆಗಿತ್ತು, ಆದ್ದರಿಂದ ಊಟಕ್ಕೆ ಹೋಗಿದ್ದೆವು ಎಂದಿದ್ದಾರೆ. ಹೀಗಾಗಿ ಸಿಎಂಎಸ್ ವಾಹನ ಸಿಬ್ಬಂದಿ ಮೇಲೆ ಪೊಲೀಸರಿಗೆ ಮತ್ತಷ್ಟು ಅನುಮಾನ ಮೂಡಿದೆ ಎಂದಿದ್ದಾರೆ.








