ನವದೆಹಲಿ : ಮೇ 19, 2023ರ ವೇಳೆಗೆ ಚಲಾವಣೆಯಲ್ಲಿದ್ದ 2000 ರೂ ಮುಖಬೆಲೆಯ ನೋಟುಗಳಲ್ಲಿ ಶೇಕಡಾ 98.12 ರಷ್ಟು ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಬಹಿರಂಗಪಡಿಸಿದೆ.
ಕಳೆದ ವರ್ಷ ಮೇ ತಿಂಗಳಲ್ಲಿ ₹2000 ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವ ಬಗ್ಗೆ ಆರ್ಬಿಐ ಘೋಷಿಸಿತು. ಸಧ್ಯ ಇದು ಕರೆನ್ಸಿ ಪರಿವರ್ತನೆ ಪ್ರಕ್ರಿಯೆಯಲ್ಲಿ ಮಹತ್ವದ ಮೈಲಿಗಲ್ಲನ್ನು ಸೂಚಿಸುತ್ತದೆ. ಚಲಾವಣೆಯಲ್ಲಿರುವ 2000 ರೂ. ಬ್ಯಾಂಕ್ ನೋಟುಗಳ ಒಟ್ಟು ಮೌಲ್ಯವು ಮೇ 19, 2023 ರಂದು ವಹಿವಾಟಿನ ಮುಕ್ತಾಯದ ವೇಳೆಗೆ 3.56 ಲಕ್ಷ ಕೋಟಿಯಷ್ಟಿತ್ತು, ಡಿಸೆಂಬರ್ 31, 2024 ರಂದು ವ್ಯವಹಾರದ ಮುಕ್ತಾಯದ ವೇಳೆಗೆ 6,691 ಕೋಟಿ ರೂ.ಗೆ ಇಳಿಕೆಯಾಗಿದೆ ಎಂದು ಆರ್‌ಬಿಐ ತಿಳಿಸಿದೆ.
ಮೇ 19, 2023 ರಂತೆ ಚಲಾವಣೆಯಲ್ಲಿರುವ 2000 ರೂ. ಬ್ಯಾಂಕ್ ನೋಟುಗಳಲ್ಲಿ 98.12 ಪ್ರತಿಶತವನ್ನು ಹಿಂತಿರುಗಿಸಲಾಗಿದೆ ಎಂದು ತಿಳಿಸಿದೆ.