ಹಾವೇರಿ : ಹಾವೇರಿಯಲ್ಲಿ ಮಹಿಳೆಯೊಬ್ಬಳು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಡ್ರಾಮಾ ಮಾಡಿದ್ದು ಆದರೆ ಪೊಲೀಸರು ವಾಕ್ಯವನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ ಅಸಲಿ ಸತ್ಯ ಹೊರ ಬಂದಿದೆ. ಹೌದು ಗ್ಯಾಂಗ್ ರೇಪ್ ಕಥೆ ಕಟ್ಟಿ ಮಹಿಳೆ ಒಬ್ಬಳು ಪೊಲೀಸರಿಗೆ ಟೆನ್ಶನ್ ಕೊಟ್ಟಿದ್ದಾಳೆ.
ಸಾಲದ ವಿಚಾರಕ್ಕೆ ನಡೆದ ಗಲಾಟೆಗೆ ಫೀರಾಂಬಿ ಎನ್ನುವ ಮಹಿಳೆ ಅತ್ಯಾಚಾರದ ಕಥೆ ಕಟ್ಟಿದ್ದಾಳೆ. ಐದು ಜನರಿಂದ ಗ್ಯಾಂಗ್ ರೇಪ್ ನಡೆದಿರುವುದಾಗಿ ಮಹಿಳೆಯೊಬ್ಬಳು ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಪೊಲೀಸರ ಬಳಿ ತನ್ನ ಮೇಲೆ ಅತ್ಯಾಚಾರ ನಡೆದಿಲ್ಲ, ಇಬ್ಬರು ಮಹಿಳೆಯರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಒಪ್ಪಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ನಡೆದಿದೆ.
ಮಂಗಳವಾರ ರಾತ್ರಿ ಯಾರೋ ಕೆಲವರು ತನ್ನ ಬೆನ್ನಿಗೆ ಪ್ರಜ್ಞೆ ತಪ್ಪಿಸುವ ಇಂಜೆಕ್ಷನ್ ಕೊಟ್ಟು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿ ದೈಹಿಕವಾಗಿ ಹಲ್ಲೆ ಮಾಡಿದ್ದರು, ನಾನು ಅವರಿಂದ ತಪ್ಪಿಸಿಕೊಂಡು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಾಗಿದೆ ಎಂದು ಮಹಿಳೆ ಮಾಧ್ಯಮಗಳ ಬಳಿ ಹೇಳಿಕೆ ನೀಡಿದ್ದಳು. ಮಹಿಳೆಯ ಹೇಳಿಕೆಗಳು ಪೊಲೀಸರಲ್ಲಿ ಹಲವು ಅನುಮಾನಗಳನ್ನು ಮೂಡಿಸಿತು. ಪೊಲೀಸರು ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ಹಣಕಾಸಿನ ವಿಚಾರಕ್ಕೆ ಜಗಳವಾಗಿದ್ದು, ಇಬ್ಬರು ಮಹಿಳೆಯರು ನನ್ನ ಮೇಲೆ ಹಲ್ಲೆ ನಡೆಸಿದ್ದಾಗಿ ಮಹಿಳೆ ಬಾಯ್ದಿಟ್ಟಿದ್ದಾಳೆ.