ಬೆಂಗಳೂರು : ರಾಜ್ಯದ ದೇವಾಲಯಗಳ ಅರ್ಚಕರು, ನೌಕರರ ವೇತನ ತಾರತಮ್ಯ ಸರಿಪಡಿಸಲಾಗುವುದು ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.
ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಲಾಗುವುದು ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.