ಉಡುಪಿ : ಉಡುಪಿಯಲ್ಲಿ ಘೋರ ಘಟನೆ ನಡೆದಿದ್ದು ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಡ ದೋಣಿ ಪಲ್ಟಿಯಾಗಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಲೈಟ್ ಹೌಸ್ ನಲ್ಲಿ ಒಂದು ಘಟನೆ ನಡೆದಿದೆ. ಅಲೆಗಳ ಹೊಡೆತಕ್ಕೆ ಸಲುಕೆ ಬಿದ್ದಿದೆ 7 ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.ಮಲ್ಪೆಯಿಂದ ಏಳು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು.
ನಿನ್ನೆ ಬೆಳಗ್ಗೆ ಶಾರದಾ ಎಂಬವರ ಮಾಲೀಕತ್ವದ ದೋಣಿಯಲ್ಲಿ ಮೀನುಗಾರರು ಉಪ್ಪುಂದ ಗ್ರಾಮದ ಮೆಡಿಕಲ್ ಕಡಲ ತೀರದಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದರು. ಈ ವೇಳೆ, ಬೃಹತ್ ಅಲೆಗಳು ಹೊಡೆತಕ್ಕೆ ಸಿಕ್ಕಿ ದೋಣಿ ಮಗುಚಿದ್ದು, ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದಾರೆ. ಆದರೆ, ಮೀನುಗಾರರು ಲೈಫ್ ಜಾಕೆಟ್ ಧರಿಸಿದ್ದರಿಂದ ಅವರಿಗೆ ಈಜಿ ದಡ ಸೇರಲು ಸಾಧ್ಯವಾಗಿದೆ.
ಪ್ರಜ್ವಲ್ ಖಾರ್ವಿ, ಪ್ರಮೋದ್ ಖಾರ್ವಿ, ಗೌತಮ್ ಖಾರ್ವಿ, ಭಾಸ್ಕರ್ ಖಾರ್ವಿ, ಯೋಗಿರಾಜ್ ಖಾರ್ವಿ, ಗೋವಿಂದ ಖಾರ್ವಿ, ಬಾಬು ಖಾರ್ವಿ, ದೀಪಕ್ ಖಾರ್ವಿ ಎಂಬ ಮೀನುಗಾರರು ಈಜಿ ದಡ ಸೇರಿದ್ದಾರೆ. ಸ್ಥಳೀಯರು ಪರ್ಯಾಯ ದೋಣಿ ಮೂಲಕ ಹಗ್ಗ ಬಳಸಿ ದೋಣಿಯನ್ನು ದಡಕ್ಕೆ ತಂದು ಸಮುದ್ರದಲ್ಲಿ ಕೊಚ್ಚಿ ಹೋಗುವುದನ್ನು ತಪ್ಪಿಸಿದ್ದಾರೆ.