ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಸಿಬ್ಬಂದಿಗಳು ಕಿರುಕುಳ ನೀಡಿದ್ರೆ ಈ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ ದೂರು ನೀಡಬಹುದು ಎಂದು ಸೂಚನೆ ನೀಡಲಾಗಿದೆ.
ಬಡಜನರ ಅವಶ್ಯಕತೆಯನ್ನು ಬಂಡವಾಳ ಮಾಡಿಕೊಳ್ಳುವ ಕೆಲವು ವ್ಯಕ್ತಿಗಳು,ಅನಧಿಕೃತ ಲೇವಾದೇವಿದಾರರು ಜನರ ತುರ್ತು ಅವಶ್ಯಕತೆಗೆ ಹಣ ನೀಡಿ, ಹೆಚ್ಚು ಬಡ್ಡಿ ವಿಧಿಸಿ ಶೋಷಣೆ ಮಾಡುತ್ತಾರೆ. ಅಂತಹ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು ಸಹಾಯವಾಣಿ 112 ಅಥವಾ 1902 ಸಂಖ್ಯೆಗೆ ದೂರು ನೀಡಬಹುದು.