ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತಷ್ಟು ಗುಣಮಟ್ಟದ ವೈದ್ಯಕೀಯ ಸೇವೆಗಳ ದೊರೆಯುವ ನಿಟ್ಟಿನಲ್ಲಿ ಹೆಚ್ಚುವರಿ ವೈದ್ಯರ ನೇಮಕಕ್ಕೆ ಅನುಮತಿ ಸಿಕ್ಕಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತಷ್ಟು ಗುಣಮಟ್ಟದ ವೈದ್ಯಕೀಯ ಸೇವೆಗಳು ದೊರೆಯಬೇಕು ಎನ್ನುವ ನಿಟ್ಟಿನಲ್ಲಿ ಹೆಚ್ಚುವರಿ ವೈದ್ಯರ ನೇಮಕಕ್ಕೆ ಅನುಮತಿ ದೊರೆತಿದೆ. ಇದರ ಜೊತೆಗೆ ಪ್ರಸೂತಿ ಮತ್ತು ತಜ್ಞ ವೈದ್ಯರ ವೇತನ ಹೆಚ್ಚಳಕ್ಕೂ ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಇನ್ನೂ ಅಧಿಕೃತವಾಗಿ ಮರಳುಗಾರಿಕೆಗೆ ಅವಕಾಶ ನೀಡಿದ್ದರೂ ಕೂಡ ಅಕ್ರಮವಾಗಿ ಮರಳು ದೋಚುವುದು ನಡೆಯುತ್ತಿದೆ. ಸೇತುವೆಗಳ ಬಳಿಯ ಮರಳನ್ನು ಕೂಡ ಜನ ಬಿಡುತ್ತಿಲ್ಲ. ಸೇತುವೆಗಳು ಕುಸಿದರೆ, ಸೇತುವೆಗಳ ನವೀಕರಣಕ್ಕೆ ಕೋಟ್ಯಾಂತರ ರೂಪಾಯಿ ಹಣ ವ್ಯಯವಾಗುತ್ತದೆ. ಇದೆಲ್ಲಾ ಜನರದ್ದೇ ಹಣ ಅಲ್ಲವೇ?. ಹೀಗಾಗಿ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಸಾರ್ವಜನಿಕರು ಸರ್ಕಾರದ ಕೈ ಜೋಡಿಸಬೇಕು ಎಂದು ತಿಳಿಸಿದ್ದಾರೆ.