ಬೆಂಗಳೂರು : ಗರ್ಭಿಣಿಯರ ಆರೋಗ್ಯ ಸುರಕ್ಷತೆಗಾಗಿ “ಮಾತೃತ್ವ ಸುರಕ್ಷತಾ ಅಭಿಯಾನ”ಕ್ಕೆ ರಾಯಚೂರಿನಲ್ಲಿ ಚಾಲನೆ ನೀಡಲಾಗುತ್ತಿದೆ.
ತಿಂಗಳಿಗೆ ಎರಡು ಬಾರಿ ಅಂದರೆ ಪ್ರತಿ ತಿಂಗಳ 9 ಮತ್ತು 24ರಂದು ಗರ್ಭಿಣಿಯರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಈ ಅಭಿಯಾನವನ್ನು ಕಡ್ಡಾಯವಾಗಿ, ನಿರಂತರವಾಗಿ ನಡೆಸಲು ಸೂಚನೆ ನೀಡಲಾಗಿದೆ. ಗರ್ಭಿಣಿಯರ ಆರೋಗ್ಯ ರಕ್ಷಣೆ ನಮ್ಮ ಆದ್ಯತೆಯಾಗಿದ್ದು ರಾಜ್ಯಾದ್ಯಂತ ಉಚಿತ ಆರೋಗ್ಯ ಶಿಬಿರಗಳ ಮೂಲಕ ಗರ್ಭಿಣಿಯರ ನಿರಂತರವಾಗಿ ಆರೋಗ್ಯ ತಪಾಸಣೆ ನಡೆಸಲಾಗುವುದು.