ಬೆಂಗಳೂರು : ಬೆಂಗಳೂರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಸರ್ಕಾರ ಮುಜರಾಯಿ ಇಲಾಖೆಗೆ ತೆಗೆದುಕೊಂಡಿದ್ದು, ಈ ವಿಚಾರವಾಗಿ ಇದೀಗ ಹೈಕೋರ್ಟಿಗೆ ಮುಜರಾಯಿ ಇಲಾಖೆ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ.
ಹೌದು ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಮುಜರಾಯಿ ಇಲಾಖೆ ತನ್ನ ಸುಪರ್ದಿಗೆ ತೆಗೆದುಕೊಂಡ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕು ಎಂದು ವಕೀಲ ಪಿ.ಪ್ರಸನ್ನ ಕುಮಾರ್ ಅವರು ನ್ಯಾಯಮೂರ್ತಿ ಸುನಿಲ್ ದತ್ತ ಯಾದವ್ ಅವರಿದ್ದ ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಪೀಠ, ನಾಳೆ ವಿಚಾರಣೆಗೆ ಪರಿಗಣಿಸುವುದಾಗಿ ತಿಳಿಸಿದೆ.