ಚಿಕ್ಕಮಗಳೂರು : ಗೂಗಲ್ ಮ್ಯಾಪ್ ನಂಬಿ ಅದೆಷ್ಟು ಅನಾಹುತಗಳು ನಡೆದಿವೆ. ಅದೆಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಚಿಕ್ಕಮಂಗಳೂರಿನಲ್ಲಿ ಘಟನೆ ನಡೆದಿದ್ದು ಗೂಗಲ್ ಮ್ಯಾಪ್ ನಂಬಿ ಟಿಟಿ ವಾಹನ ಒಂದು ಸೀದಾ ರೈತನ ಗದ್ದೆಗೆ ನುಗ್ಗಿರುವ ಘಟನೆ ವರದಿಯಾಗಿದೆ.
ಹೌದು ಗೂಗಲ್ ಮ್ಯಾಪ್ ನಂಬಿ ಬಂದಿದ್ದ ಪ್ರವಾಸಿಗರು, ವಾಹನವನ್ನು ಗದ್ದೆಗೆ ಇಳಿಸಿಕೊಂಡು ಪರದಾಡಿದ ಘಟನೆ ಆಲ್ದೂರು ಬಳಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗರು ಬಾಳೆಹೊನ್ನೂರು ಕಡೆಯಿಂದ ಮೂಡಿಗೆರೆಗೆ ತೆರಳುತ್ತಿದ್ದರು. ಈ ವೇಳೆ, ಗೂಗಲ್ ಮ್ಯಾಪ್ ಕೈ ಕೊಟ್ಟಿದ್ದು, ವಾಹನ ಗದ್ದೆ ಬಳಿ ಹೋಗಿ ಸಿಕ್ಕಿ ಹಾಕಿಕೊಂಡಿದೆ. ಇದರಿಂದ ವಾಹನ ವಾಪಸ್ ತೆಗೆಯಲಾಗದೆ ಪ್ರವಾಸಿಗರು ಕೆಲವು ಕಾಲ ಅಲ್ಲೇ ಪರದಾಡಿದ್ದಾರೆ.
ತಕ್ಷಣವೇ ಸ್ಥಳೀಯರು ಪ್ರವಾಸಿಗರ ನೆರವಿಗೆ ಧಾವಿಸಿದ್ದಾರೆ ಕೂಡಲೇ ಟ್ರ್ಯಾಕ್ಟರ್ ಒಂದನ್ನು ತಂದು ಅದಕ್ಕೆ ಹಗ್ಗ ಕಟ್ಟಿ ಗದ್ದೆಯಿಂದ ಟಿಟಿಯನ್ನು ರಸ್ತೆಗೆ ಎಳೆದು ತಂದಿದ್ದಾರೆ ಬಳಿಕ ಸ್ಥಳೀಯ ಮಾಹಿತಿ ಪಡೆದುಕೊಂಡು ಪ್ರವಾಸಿಗರು ಅಲ್ಲಿಂದ ತೆರಳಿದ್ದಾರೆ.