ಬೆಂಗಳೂರು: ಆಸ್ಪತ್ರೆ ವೈಫಲ್ಯದಿಂದಾಗಿ ಅಪಘಾತ ಸಂತ್ರಸ್ತರಿಗೆ ವಿಮೆ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ರಸ್ತೆ ಅಪಘಾತದಲ್ಲಿ ಗಾಯ ಗೊಂಡಿರುವುದನ್ನು ಸಾಬೀತುಪಡಿಸಲು ವಿಫಲರಾಗಿದ್ದಾರೆ ಎಂದು ವಿಮೆ ಪರಿಹಾರ ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪಾಂಡುರಂಗ ಶಿವಾನೆ ಮತ್ತು ಅವರ ಪತ್ನಿ ಸಲ್ಲಿಸಿದ್ದ ಮೇಲ್ಮನವಿಗಳನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಡಾ. ಚಿಲಕೂರು ಸುಮಲತಾ ಅವರ ಏಕಸದಸ್ಯ ನ್ಯಾಯಪೀಠವು, ರಸ್ತೆ ಅಪಘಾತ ಪ್ರಕರಣಗಳನ್ನು ಪೊಲೀಸರಿಗೆ ತಿಳಿಸಲು ಆಸ್ಪತ್ರೆ ವಿಫಲವಾಗಿದೆ ಎಂಬ ಕಾರಣಕ್ಕೆ ಸಂತ್ರಸ್ತರಿಗೆ ಅಪಘಾತ ಪರಿಹಾರ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಆಸ್ಪತ್ರೆ ನೀಡಿರುವ ಗಾಯದ ಪ್ರಮಾಣಪತ್ರಗಳಲ್ಲಿ ರಸ್ತೆ ಅಪಘಾತ ಎಂದು ಸ್ಪಷ್ಟವಾಗಿ ನಮೂದಿಸಲಾಗಿದೆ. ಆಸ್ಪತ್ರೆಯವರು ಪೊಲೀಸರಿಗೆ ಮಾಹಿತಿ ನೀಡದಿದ್ದರೂ ಅದರ ಪರಿಣಾಮ ಅರ್ಜಿದಾರರ ವಿಮೆ ಪರಿಹಾರದ ಮೇಲಾಗಬಾರದು ಎಂದು ಹೈಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ








