ಬೆಂಗಳೂರು : ಯುಗಾದಿ ಹಬ್ಬದ ನಿಮಿತ್ಯವಾಗಿ ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್ಚನಗೌಡ ತುಫಿಹಾಳ ಪುತ್ರ ಹಾಗೂ ಶಾಸಕರ ಸಹೋದರ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿ ಮರಗಳನ್ನು ಭೇಟಿಯಾಡಿ ಕಟ್ಟಿಗೆಗೆ ಕಟ್ಟಿ ಬರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ, ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಇಲಾಖೆ ಸಚಿವ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ಕುರಿತು ಮಾಹಿತಿ ಬಂದಿದ್ದು ಈ ಒಂದು ಪ್ರಕರಣದಲ್ಲಿ ಯಾರೇ ಇದ್ದರೂ ಕೂಡ ಅವರ ವಿರುದ್ಧ ಸೂಕ್ತವಾದಂತಹ ಕ್ರಮ ಕೈಗೊಳ್ಳಲಾಗುತ್ತದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದವರು ಯಾರೇ ಇದ್ದರೂ ಅವರನ್ನು ರಕ್ಷಣೆ ಮಾಡುವುದಿಲ್ಲ. ಶಾಸಕರ ಪುತ್ರ ಹಾಗೂ ಸಹೋದರನ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ರಾಯಚೂರು ಜಿಲ್ಲೆಯ ಮಸ್ಕಿ ಕಾಂಗ್ರೆಸ್ ಶಾಸಕ ಆರ್ ಬಸವನಗೌಡ ತುರ್ವಿಹಾಳ ಪುತ್ರ ಸತೀಶ್ ಗೌಡ ಮತ್ತು ಸಹೋದರನ ನೇತೃತ್ವದಲ್ಲಿ ಯುಗಾದಿ ಹಬ್ಬದ ನಿಮಿತ್ಯ ಮೊಲಗಳನ್ನು ಬೇಟೆಯಾಡಿ ಮೆರವಣಿಗೆ ಮಾಡಲಾಗಿತ್ತು. ನೂರಾರು ಜನರ ಜೊತೆಗೆ ಖಡ್ಗ ಮತ್ತು ಕೊಡಲಿ ಪ್ರದರ್ಶನ ಮಾಡುತ್ತಾ ಮೆರವಣಿಗೆ ನಡೆಸಲಾಗಿತ್ತು ಮೊಲಗಳನ್ನು ಬೇಟೆಯಾಡಿ ಮೆರವಣಿಗೆ ಮಾಡುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.